ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಲಿಪಾಡ್ಯಮಿ ದಿನವಾದ ಸೋಮವಾರ ಗೋಧೋಳಿ ಸಮಯದಲ್ಲಿ ಸಾಮೂಹಿಕ ಗೋಪೂಜೆ ದೇವಸ್ಥಾನದ ಗೋಶಾಲೆಯಲ್ಲಿ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್‍. ಭಟ್ ಹಾಗೂ ವಸಂತ ಕೆದಿಲಾಯ ಗೋಶಾಲೆ ಆವರಣದಲ್ಲಿ ಗೋಪೂಜೆಯ ವಿಧಿ ವಿಧಾನಗಳನ್ನು ನಡೆಸಿದರು. ಪ್ರಶಾಂತ್ ಭಟ್ ಸಹಕರಿಸಿದರು. ಮಹಿಳೆಯರಿಂದ ಗೋಪೂಜೆ ಸೇವೆ ನಡೆಯಿತು.

ಬಳಿಕ ಗೋವುಗಳಿಗೆ ಹೂವಿನ ಹಾರ ಹಾಕಿ ಅವಲಕ್ಕಿ, ದೋಸೆಯನ್ನು ತಿನ್ನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಮೂರು ವರ್ಷಗಳಿಂದ ಗೋಪೂಜೆ ಮಾಡುತ್ತಾ ಬಂದಿದ್ದೇವೆ. ಕಳೆದ ವರ್ಷದಿಂದ ಗೋಶಾಲೆ ತೆರೆದಿದ್ದೇವೆ.

ಈ ಭಾರಿಯೂ ಗೋಪೂಜೆ ನಡೆದಿದೆ. ಈ ಸಂದರ್ಭದಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ನೆನಪಿಸಬೇಕಾಗುತ್ತದೆ. ಏಕೆಂದರೆ ದೇಶಿ ವಿವಿಧ ತಳಿಗಳ ಪುನರುತ್ಥಾನಕ್ಕಾಗಿ ಗೋವಿನ ಆಂದೋಲನ ಮಾಡುವಲ್ಲಿ ಅವರ ಅನುಗ್ರಹ ನೆನಪಿಸಿಕೊಳ್ಳಬೇಕಾಗುತ್ತದೆ.

ಈ ಆಂದೋಲನದ ಪರಿಣಾಮ ಭಾರತದಾದ್ಯಂತ ಗೋವಿನ ಬಗ್ಗೆ ಜಾಗೃತಿ ಜಾಸ್ತಿಯಾಗಿದೆ. ಹಾಗೆಯೇ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇಶಿ ತಳಿಯನ್ನು ಸಾಕುತ್ತಿದ್ದು, ಶ್ರೀ ಮಹಾಲಿಂಗೇಶ್ವರನ ಅಭಿಷೇಕಕ್ಕೋಸ್ಕರ,. ದೇಶಿ ತಳಿ ಗೋವಿನ ಹಾಲು ಪೌಷ್ಠಿಕಾಂಶದಿಂದ ಕೂಡಿದೆ. ಈ ನಿಟ್ಟಿನಲ್ಲಿ ದೇಶಿ ತಳಿ ಗೋವಿನ ಸಾಕಣೆಯನ್ನು ಹೆಚ್ಚಿಸುವ ಯೋಜನೆಯಿದೆ. ಇದಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರೇರಣೆಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ಡಾ.ಸುಧಾ ಎಸ್‍. ರಾವ್, ವೀಣಾ ಬಿ.ಕೆ., ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ, ಗೋಪೂಜೆ ಸೇವಾಕರ್ತರು, ಭಕ್ತಾದಿಗಳು ಉಪಸ್ಥಿತರಿದ್ದರು.

Gayathri SG

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

13 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

26 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

50 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago