ಮಂಗಳೂರು

ಕೈ ಗ್ಯಾರಂಟಿ ಕಾರ್ಡ್ ವಿಸಿಟಿಂಗ್ ಕಾರ್ಡ್ ಇದ್ದಂತೆ, ಸಿಎಂ‌ ಬೊಮ್ಮಾಯಿ ಲೇವಡಿ

ಮಂಗಳೂರು: ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ-ಮಗನ ಸಂಬಂಧ. ಸೋಮಣ್ಣ ಅವರು ವೈಯಕ್ತಿಕ ಕಾರಣದಿಂದ ದೆಹಲಿಗೆ  ಹೋಗಿದ್ದಾರೆ. ಸೊಮಣ್ಣ ಅವರಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಯಡಿಯೂರಪ್ಪ ಅವರು ಎಲ್ಲರಿಕ್ಕಿಂತ ಎತ್ತರದ ಲೀಡರ್. ಸೋಮಣ್ಣ ಅವರಿಗೆ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ  ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳೂರಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಡ್ಗಿಚ್ಚು ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀರುತ್ತದೆ. ಈಗಾಗಲೇ ಡಿಸಿ ಜೊತೆ ಸಭೆಯನ್ನು ಮಾಡಿದ್ದೇವೆ. ಬೆಂಕಿ ನಂದಿಸಲು ಕ್ರಮ ಕೈಗೊಳ್ಳಲಾಗಿದೆ ಜೊತೆಗೆ ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಇಲಾಖೆಗೆ ಬೆಂಕಿ‌ ನಂದಿಸಲು ಹೆಲಿಕಾಪ್ಟರ್ ಬಳಕೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.

 

ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ವಿಚಾರವಾಗಿ ಸಿಎಂ ಬೊಮ್ಮಾಯಿ ಹೇಳಿಕೆ

ಕುಡಿಯುವ ನೀರಿನ ವಿಚಾರವಾಗಿ ಟಾಸ್ಕ್ ಫೊರ್ಸ್ ಮಾಡಲಾಗಿದೆ. ನೀರಿಗಾಗಿ ಕೆಲವು ಕಡೆ  ಸಮಸ್ಯೆಗಳಿವೆ. ಕೆಲವು ಭಾಗದಲ್ಲಿ ಬೋರ್ ವೆಲ್ ಗಳು ಬತ್ತಿ ಹೋಗಿದೆ ಈ ಬಗ್ಗೆ ವರದಿ ತರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ವಿಚಾರ

ಟೋಲ್ ಸಂಗ್ರಹಕ್ಕೆ ಕಾಂಗ್ರೆಸ್ ವಿರೋಧ ವಿಚಾರವಾಗಿ ಮಾತನಾಡಿದ ಸಿಎಂ, ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಟೋಲ್ ಆಗಿಲ್ವಾ. ಕಾಂಗ್ರೆಸ್ ನದ್ದು ಕೆಟ್ಟ ಪರಂಪರೆ ಎಂದು ಕಿಡಿಕಾರಿದರು.

ಹಿರಿಯರಿಗೆ ಟಿಕೆಟ್ ನೀಡುವ ವಿಚಾರ

ಟಿಕೆಟ್ ಹಂಚಿಕೆ ಬಗ್ಗೆ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡೋದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರವಾಗಿ ಬಿಡುಗಡೆಯಾಗಲಿದೆ. ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಗೆಲ್ಲುವ ನಿರ್ಧಾರ ಕೈಗೊಳ್ಳಲಿದೆ ಎಂದರು.

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ‌ನಿಂದ ಗ್ಯಾರಂಟಿ ಕಾರ್ಡ್ ವಿಚಾರ

ಗ್ಯಾರಂಟಿ ಕಾರ್ಡ್ ಗಾಗಿ ಯಾಕೆ ಹತಾಶೆ ಆಗಬೇಕು. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇವರ ಮಾತಿಗೆ ಗ್ಯಾರಂಟಿ ಇಲ್ವಾ? ಗ್ಯಾರಂಟಿ ಕಾರ್ಡ್ ಯಾಕೆ ಕೊಡಬೇಕು. ಗ್ಯಾರಂಟಿ ಕಾರ್ಡ್ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ ಸಿಎಂ‌ ಬೊಮ್ಮಾಯಿ ಲೇವಡಿ ಮಾಡಿದರು.

Gayathri SG

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

12 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

28 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

43 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago