ಮಂಗಳೂರು

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಸುಳ್ಯ : ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ‘ಚಿಣ್ಣರ ತಕಧಿಮಿ’ ಮಕ್ಕಳ ಬೇಸಗೆ ಶಿಬಿರದ ಅಂಗವಾಗಿ ಏ. 3ರಂದು ಮೆಟ್ರಿಕ್ ಮೇಳ ಜರುಗಿತು.

ಮಕ್ಕಳಿಗೆ ವ್ಯವಹಾರ ಪಾಠ ಕಲಿಯುವಿಕೆಯ ದೃಷ್ಟಿಯಿಂದ ಈ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು. ತಾವು ಮನೆಯಲ್ಲಿ ಬೆಳೆದ ವಿಧವಿಧದ ತರಕಾರಿ, ತಯಾರಿಸಿದ ವಸ್ತುಗಳು, ಹಣ್ಣು ಹಂಪಲುಗಳು, ಔಷಧೀಯ ಗಿಡಗಳು, ಆಹಾರ ಪದಾರ್ಥಗಳು, ತಂಪು ಪಾನೀಯಗಳು ಇಲ್ಲಿ ಮಾರಾಟಕ್ಕೆ ಲಭ್ಯವಿತ್ತು.

ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ಉದ್ಘಾಟಿಸಿದರು. ಕೋಶಾಧಿಕಾರಿ ರಾಧಾಕೃಷ್ಣ ರಾವ್ ಯು ಮಾತನಾಡಿ, ಶುಭ ಹಾರೈಸಿದರು.

ಸಂಚಾಲಕ ಪಿ.ಜಿ.ಎಸ್.ಎನ್ ಪ್ರಸಾದ್, ಎಸ್.ಡಿ.ಎಂ.ಸಿ ಅಧ್ಯಕ್ಷ ಭುವನೇಶ್ವರ ಪಿ, ಮುಖ್ಯ ಗುರುಗಳಾದ ಕೃಷ್ಣಮೂರ್ತಿ, ಶಾಲಾ ವಿದ್ಯಾರ್ಥಿ ನಾಯಕರುಗಳಾದ ನಿತೀಶ್, ಜಾಹ್ನವಿ, ಶಾಲಾ ಅಧ್ಯಾಪಕರು, ಪೋಷಕರು ಉಪಸ್ಥಿತರಿದ್ದರು.

ಗೌರವ ಶಿಕ್ಷಕರಾದ ಶಿವಪ್ರಸಾದ ಜಿ. ಮೆಟ್ರಿಕ್ ಮೇಳವನ್ನು ಆಯೋಜಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದರು. ಒಂದು ವಾರ ಕಾಲ ನಡೆಯುವ ಬೇಸಗೆ ಶಿಬಿರದಲ್ಲಿ ಚಿತ್ರಕಲೆ, ಪೈಂಟಿಂಗ್, ಜನಪದ ಗೀತೆಗಳು, ರಂಗಗೀತೆ, ಕ್ಲೇ ಮಾಡೆಲಿಂಗ್, ಬಬಲ್ ಆರ್ಟ್ ಮುಂತಾದ ವಿಷಯಗಳ ಬಗ್ಗೆ ನಾಡಿನ ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ವಿಶೇಷ ತರಬೇತಿ ನೀಡುತ್ತಿದ್ದಾರೆ.

Sneha Gowda

Recent Posts

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

13 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

24 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

38 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

55 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

2 hours ago