News Karnataka Kannada
Sunday, April 28 2024
ಮಂಗಳೂರು

ಸಭೆಯಿಂದ ‘ಗೆಟ್ ಔಟ್’ ಎಂದ ಸಚಿವ ಬೈರತಿ ಸುರೇಶ್‌

Minister Byrathi Suresh says 'get out' of meeting
Photo Credit : News Kannada

ಮಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಚೀಫ್ ಎಂಜಿನಿಯರ್‌ಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ‘ಗೆಟ್ ಔಟ್’ ಎಂದು ಸಭೆಯಿಂದ ಹೊರಹಾಕಿದ ಘಟನೆ ನಡೆದಿದೆ.

ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆಯಿತು.

ಕೆಯುಐಡಿಎಫ್‌ಸಿ ಕಾಮಗಾರಿಗಳು ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ. ಶೇ.60ರಷ್ಟು ಕಾಮಗಾರಿ ನಡೆಸಲು 4 ವರ್ಷ ಹಿಡಿದಿದೆ. ಇನ್ನುಳಿದ ಶೇ.40ರಷ್ಟು ಕಾಮಗಾರಿ ಇನ್ನು ನಾಲ್ಕೈದು ತಿಂಗಳಲ್ಲಿ ಸಂಪೂರ್ಣಗೊಳಿಸಲು ಆಗುತ್ತಾ? ಎಂದು ಚೀಫ್‌ ಎಂಜಿನಿಯರ್‌ ಜಯರಾಮ್‌ ಅವರನ್ನು ಸಚಿವರು ಪ್ರಶ್ನಿಸಿದರಲ್ಲದೆ, ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಜಯರಾಮ್‌ ‘ಹಾಗಾದರೆ ನಾನು ರಿಸೈನ್ ಮಾಡ್ತೇನೆ’ ಎಂದರು.

ಇದರಿಂದ ತೀವ್ರ ಕೆರಳಿದ ಸಚಿವ ಬೈರತಿ ಸುರೇಶ್‌, ಗೆಟ್ ಔಟ್ ಫ್ರಂ ಹಿಯರ್ ಎಂದು ಆಜ್ಞೆ ಮಾಡಿದರು. ಕೊನೆಗೆ ಅಧಿಕಾರಿ ಸಭೆಯಿಂದ ಹೊರನಡೆದರು. ಜಯರಾಮ್ ಅವರು ಕೆಯುಐಡಿಎಫ್‌ಸಿ ಚೀಫ್‌ ಎಂಜಿನಿಯರ್‌ ಆಗಿ ನಿವೃತ್ತರಾದ ಬಳಿಕ ಗುತ್ತಿಗೆ ಆಧಾರದಲ್ಲಿ ಮುಂದುವರಿದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು