ಧರ್ಮಸ್ಥಳ: ರಾಜ್ಯದ ವಸತಿ ಸಚಿವ ವಿ. ಸೋಮಣ್ಣ ಶುಕ್ರವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತ ಆಗಮಿಸಿದರು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.
ಶಾಸಕ ಹರೀಶ್ ಪೂಂಜ, ಶ್ರೀನಿವಾಸ ರಾವ್ ಸ್ವಾಗತಿಸಿದರು. ಸಚಿವರು ಶನಿವಾರ ಬೆಳ್ತಂಗಡಿ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಬಸವ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಮಾಡಲಿದ್ದಾರೆ.