News Karnataka Kannada
Monday, April 29 2024
ಮಂಗಳೂರು

ವಿವಾಹಿತನಿಂದ ಅಪ್ರಾಪ್ತ ಬಾಲಕಿಗೆ ಕಿರುಕುಳ: ದೂರು

FIR against hospital for giving expired injection to child causing bleeding
Photo Credit : IANS

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಆಟೋ ಚಾಲಕ ಅಪ್ರಾಪ್ತೆ ಬಸ್‌ ಗೆ ಕಾಯುತ್ತಿದ್ದ ವೇಳೆ ಮಾತನಾಡಲು ಯತ್ನಿಸಿದ್ದು, ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಜೂನ್‌ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದು, ಪೋಷಕರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾದ ನಂತರ ವಿವಾಹಿತ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಪತ್ತೆಗೆ ಕೊಣಾಜೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು