News Karnataka Kannada
Monday, April 29 2024
ಮಂಗಳೂರು

ಮಣ್ಣಿನಡಿಗೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಆರೋಗ್ಯ ವಿಚಾರಿಸಿದ ಶಾಸಕ

MLA enquires about the health of a woman who fell under the mud and was seriously injured
Photo Credit : News Kannada

ಬಂಟ್ವಾಳ: ಮನೆಯೊಂದಕ್ಕೆ ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಘಟನೆಯಲ್ಲಿ ಸಫಾಳ ತಾಯಿ ಮೃತಪಟ್ಟಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಅವರು ಕುಟುಂಬಕ್ಕೆ ಭರವಸೆ ನೀಡಿದರು.

ಸರಕಾರದಿಂದ ಸಿಗಬೇಕಾದ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು. ಘಟನೆ ನಡೆದ ಸಂದರ್ಭದಲ್ಲಿ ಶಾಸಕರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದ ಕಾರಣ ಇಂದು ಬೆಳಿಗ್ಗೆ ಆಸ್ಪತ್ರೆಗೆ ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು