News Karnataka Kannada
Wednesday, May 01 2024
ಮಂಗಳೂರು

ನಾರಾವಿ ಶಕ್ತಿ ಕೇಂದ್ರದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಹರೀಶ್ ಪೂಂಜ ಭಾಗಿ

MLA Harish Poonja attends meeting held at Naravi Shakti Kendra
Photo Credit : By Author

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಭಾಗವಾಗಿ ಮಂಗಳವಾರ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿದರು.

ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ , ಕಾರ್ಯದರ್ಶಿ ನಿತೇಶ್, ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ವಸಂತಿ‌ ಮಚ್ಚಿನ ಇದ್ದರು.

ನಾರಾವಿ ಶ್ರೀ ಸೂರ್ಯನಾರಾಯಣ ಕ್ಷೇತ್ರಕ್ಕೆ ಭೇಟಿ ನೀಡಿದ ಹರೀಶ್ ಪೂಂಜ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಬುಧವಾರ ನಾರಾವಿ ಶ್ರೀ ಸೂರ್ಯನಾರಾಯಣ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀಡರ್ವಾದ ಪಡೆದು, ಚುನಾವಣಾ ಪ್ರಚಾರವನ್ನು ಆರಂಭಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾಮ ಪಂಚಾಯತ್, ಅಧ್ಯಕ್ಷೆ ಆಶಾಲತಾ ಉಪಾಧ್ಯಕ್ಷ ‌ಉದಯ ಹೆಗ್ಡೆ ನಾರಾವಿ ಇದ್ದರು.

ಕೊಕ್ರಾಡಿ ಶಕ್ತಿ ಕೇಂದ್ರದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಹರೀಶ್ ಪೂಂಜ ಭಾಗಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಕೊಕ್ರಾಡಿ ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಪೂರ್ವ ಭಾವಿ ಸಭೆಯಲ್ಲಿ ಪಾಲ್ಗೊಂಡರು.

ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಟರಾವಿ ಮಹಾಶಕ್ತಿ ಕೇಂದ್ರ, ಅಧ್ಯಕ್ಷ ಮೋಹನ್ ಅಂಡಿಂಜೆ, ಅಂಡಿಂಜೆ ಗ್ರಾಮ‌ಪಂಚಾಯತ್ ಅಧ್ಯಕ್ಷೆ ಜಯಂತಿ ಇದ್ದರು

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು