News Karnataka Kannada
Tuesday, April 23 2024
Cricket
ಮಂಗಳೂರು

ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ ಮರುತನಿಖೆಗೆ ಒತ್ತಾಯಿಸಿ ಸಿಎಂಗೆ ಶಾಸಕ ಹರೀಶ್‌ ಪೂಂಜಾ ಮನವಿ

Mla Harish Poonja urges CM to re-investigate Soujanya rape and murder case
Photo Credit : News Kannada

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಶುಕ್ರವಾರ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಮತ್ತು ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

ಧರ್ಮಸ್ಥಳದಲ್ಲಿ 2012ರ ಅಕ್ಟೋಬರ್‌ 9ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳನ್ನು ಬರ್ಬರವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು.

ಈ ಪ್ರಕರಣದ ಬಗ್ಗೆ ಹಲವು ರೀತಿಯ ತನಿಖೆ ನಡೆದಿದ್ದು, ಶಂಕಿತ ಆರೋಪಿಯನ್ನು ಇತ್ತೀಚೆಗೆ ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶ ನೀಡಿದೆ. ಆದರೆ ಕೃತ್ಯವೆಸಗಿದ ತಪ್ಪಿತಸ್ಥರನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷೆ ನೀಡುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ ಎನ್ನುವ ದುಗಡ ಬೆಳ್ತಂಗಡಿ ತಾಲೂಕಿನ ಜನತೆಯಲ್ಲಿದೆ.

ಆದ್ದರಿಂದ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೃತ್ಯವೆಸಗಿದ ಅಪರಾಧಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸುವಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು. ಮೃತ ಸೌಜನ್ಯಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಬೆಳ್ತಂಗಡಿ ಕ್ಷೇತ್ರದ ಜನಪ್ರತಿನಿಧಿಯಾಗಿ ಒತ್ತಾಯಿಸುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು