Categories: ಮಂಗಳೂರು

ಕಡಲನಗರಿ ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮಂಗಳೂರು: ಮೈಸೂರಿನಲ್ಲಿ ಸಮಾವೇಶದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಿದ್ದಾರೆ.

ಮಂಗಳೂರು ಏರ್‌ಪೋರ್ಟ್ಗೆ ಬಂದಿಳಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಇದೇ ಮೊದಲ ಬಾರಿಗೆ ಪ್ರಧಾನಿಯವರು ರೋಡ್‌ ಶೋ ನಡೆಸುತ್ತಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಆರಂಭವಾಗಲಿರುವ ರೋಡ್‌ ಶೋ ನವಭಾರತ ವೃತ್ತದವರೆಗೆ ನಡೆಯಲಿದೆ. ಪ್ರಧಾನಿಯವರನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಜನಸಾಗರವೇ ನೆರೆದಿದೆ.

ಇನ್ನು ರೋಡ್ ಶೋನಲ್ಲಿ ಮೋದಿ ಜತೆ ಇಬ್ಬರು ಅಭ್ಯರ್ಥಿಗಳು ಮಾತ್ರ ಭಾಗಿ ಆಗಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾಗಲಿದ್ದಾರೆ. ಕಟೀಲು ಹೆಸರನ್ನೂ ಸಹ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಳುಹಿಸಿತ್ತು. ಆದರೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಮಾತ್ರ ಪಿಎಂ ಕಚೇರಿ ಅಂತಿಮಗೊಳಿಸಿದೆ.

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

11 hours ago