News Karnataka Kannada
Friday, May 03 2024
ಮಂಗಳೂರು

ಕೆಲವೇ ಕ್ಷಣಗಳಲ್ಲಿ ಮಂಗಳೂರಿನ ಲೇಡಿಹಿಲ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ

ಇಂದು ಕಡಲನಗರಿ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸಕಲ ಬಿರುದಾವಳಿಗಳೊಂದಿಗೆ ಮೋದಿ ಸ್ವಾಗತಿಸಲು ಸಿದ್ಧತೆ ನಡೆದಿದೆ
Photo Credit : NewsKarnataka

ಮಂಗಳೂರು: ಇಂದು ಕಡಲನಗರಿ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸಕಲ ಬಿರುದಾವಳಿಗಳೊಂದಿಗೆ ಮೋದಿ ಸ್ವಾಗತಿಸಲು ಸಿದ್ಧತೆ ನಡೆದಿದೆ. ಕೆಲವೇ ಕ್ಷಣಗಳಲ್ಲಿ ಮಂಗಳೂರಿನ ಲೇಡಿಹಿಲ್ ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಇನ್ನು ಮೋದಿ ಆಗಮನ ಹಿನ್ನಲೆ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಏರ್​ಪೋರ್ಟ್​​​ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಒದಗಿಸಲಾಗಿದೆ.

ಇನ್ನು ರ್ಯಾಲಿ ಆರಂಭವಾಗುವ ಸ್ಥಳಕ್ಕೆ ಬಿಜೆಪಿ ಅಭ್ಯರ್ಥಿಗಳು ಸೇರಿದಂತೆ ಪ್ರಮುಖ ನಾಯಕರ ಆಗಮನವಾಗಿದೆ.

ರೋಡ್ ಶೋನಲ್ಲಿ ಮೋದಿ ಜತೆ ಇಬ್ಬರು ಅಭ್ಯರ್ಥಿಗಳು ಮಾತ್ರ ಭಾಗಿ ಆಗಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾಗಲಿದ್ದಾರೆ. ಕಟೀಲು ಹೆಸರನ್ನೂ ಸಹ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಳುಹಿಸಿತ್ತು. ಆದರೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಮಾತ್ರ ಪಿಎಂ ಕಚೇರಿ ಅಂತಿಮಗೊಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು