ಮಂಗಳೂರು: ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಿಂದುತ್ವ ರಕ್ಷಣೆ ಉದ್ದೇಶದಿಂದ ಕಾರ್ಕಳ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಅವರ ಉದ್ದೇಶ ಏನು ಎಂಬುದು ತಿಳಿದಿದೆ. ಮತದಾರರು ಚುನಾವಣೆ ಖರ್ಚಿಗೆ ಹಣ ನೀಡಬೇಕು ಎಂದು ಕೋರುವ ಮೂಲಕ ಚುನಾವಣೆಗೆ ಸ್ಪರ್ಧಿಸುವ ನೈಜ ಉದ್ದೇಶವನ್ನು ಹೊರಹಾಕಿದ್ದಾರೆ ಎಂದು ಸಚಿವ ಸುನೀಲ್, ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ಗೆ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ನಲ್ಲಿ ವಿವರಿಸಿರುವ ಸಚಿವ ಸುನೀಲ್, ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ.
ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ” ವೋಟು, ನೋಟು” ಹೇಳಿಕೆಯ ಮೂಲಕ ತಿಳಿಸಿದ್ದೀರಿ. ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮ ಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ !
ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. (1/3)— Sunil Kumar Karkala (@karkalasunil) February 13, 2023
ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ.
ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ” ವೋಟು, ನೋಟು” ಹೇಳಿಕೆಯ ಮೂಲಕ ತಿಳಿಸಿದ್ದಿರಿ. (2/3)— Sunil Kumar Karkala (@karkalasunil) February 13, 2023
ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ. (3/3)
— Sunil Kumar Karkala (@karkalasunil) February 13, 2023