Categories: ಮಂಗಳೂರು

ಮೂಡುಬಿದಿರೆ: ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಪುತ್ರಿ ಕಣಕ್ಕೆ

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ, ವೈದ್ಯೆ ಅಮರಶ್ರೀ ಅಮರನಾಥ ಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ 52 ವರ್ಷಗಳಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ವಿಧಾನಸಭೆಗೆ ಸ್ಪರ್ಧಿಸಿದಂತಾಗಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಅಮರಶ್ರೀ, ಶುದ್ಧ ಕುಡಿಯುವ ನೀರು, ಶಿಕ್ಷಣ, ಉದ್ಯೋಗ, ಮಹಿಳಾ ಸಬಲೀಕರಣ, ಆರೋಗ್ಯ, ಪ್ರವಾಸೋದ್ಯಮ ಸಹಿತ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ತೆರಳಿ ಜೆಡಿಎಸ್ ಪಕ್ಷ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದೇನೆ. ಮುಂದಿನ ಐದು ವರುಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಯ ದೂರದೃಷ್ಟಿ ಚಿಂತನೆಯ ರೂಪುರೇಶೆ  ಸಿದ್ಧಪಡಿಸಿದ್ದು, ಆ ಪ್ರಕಾರವಾಗಿಯೇ ನಡೆಯುವುದಾಗಿ ಹೇಳಿದರು.

ಕಳೆದ ಮೂವತ್ತು ವರುಷಗಳಲ್ಲಿ ಕ್ಷೇತ್ರವ್ಯಾಪ್ತಿಯಲ್ಲಿ ಅನೇಕ ಸಮಸ್ಯೆಗಳು ಸಮಸ್ಯೆಗಳಾಗಿಯೆ ಉಳಿದುಕೊಂಡಿದೆ. ಆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವ ರಾಜಕೀಯ ಪಕ್ಷಗಳೂ ಚಿಂತಿಸದಿರುವುದು ದುರಂತವೇ ಸರಿ ಎಂದ ಅಮರಶ್ರೀಯವರು, ನಾಲ್ಕು ತಿಂಗಳುಗಳಿಂದ ಮುಲ್ಕಿ ಕ್ಷೇತ್ರದ ಮತದಾರರ ಮನೆಮನೆಗೆ ತೆರಳಿ ಸಮಸ್ಯೆಯನ್ನರಿಯುತ್ತಿದ್ದೇನೆ. ಜನಪರ ಕೆಲಸ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಿಕೊಳ್ಳುತ್ತಿದ್ದೇನೆ ಎಂದರು.

ಮೊದಲ ಚುನಾವಣೆ: ರಾಜಕೀಯ ಜೀವನದಲ್ಲಿ ಇದು ಮೊದಲ ಚುನಾವಣೆಯಾಗಿದೆ. ತಂದೆ ಅಮರನಾಥ ಶೆಟ್ಟಿಯವರ ರಾಜಕಾರಣವನ್ನು ಬಾಲ್ಯದಿಂದಲೇ ಕಂಡವಳು. ಅವರ ಮೃದು ಸ್ವಭಾವ, ಶುದ್ಧ ರಾಜಕಾರಣ, ರಾಜಕಾರಣದಲ್ಲಿ ನೆಲೆ ನಿಂತಿದ್ದು ಅದೇ ಗುಣ ಸ್ವಭಾವಗಳನ್ನು ಮೈಗೂಢಿಸಿಕೊಂಡಿದ್ದೇನೆ. ವೈದ್ಯಕೀಯ ವೃತ್ತಿಯೊಂದಿಗೆ ಕ್ಷೇತ್ರದ ಜನರ ಸೇವೆಗಾಗಿ ಶ್ರಮಿಸುವುದಾಗಿ ಅಮರಶ್ರೀ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕುಮಾರ ಸ್ವಾಮಿಯವರ ಪಂಚರತ್ನ ಯೋಜನೆ, ಕಳೆದ ಬಾರಿ ರೈತರಿಗೆ ನೀಡಲಾದ 25ಸಾವಿರ ಕೋಟಿ ಕೃಷಿಸಾಲ, ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳ ಪಟ್ಟಿಯೊಂದಿಗೆ ಮನೆ ಮನೆಗೆ ಕಾರ‍್ಯಕರ್ತರೊಂದಿಗೆ ತೆರಳಿ ತಿಳಿಸುತ್ತಿದ್ದೇನೆ ಎಂದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಆಸಿಫ್, ಹಿರಿಯ ಕಾರ್ಯಕರ್ತ ಹರಿಪ್ರಸಾದ್ ಶೆಟ್ಟಿ, ಶಿವದತ್ತ್ ಕೆ.ಬಿ ಉಪಸ್ಥಿತರಿದ್ದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago