Categories: ಮಂಗಳೂರು

ಮೂಡುಬಿದಿರೆ: ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವಾಗಿಸಲು ಜೈನರ ಆಕ್ಷೇಪ

ಮೂಡುಬಿದಿರೆ: ಜೈನ ಧರ್ಮೀಯರ ಪವಿತ್ರ ಕ್ಷೇತ್ರ ಜಾರ್ಖಂಡ್‌ನ ಶ್ರೀ ಸಮ್ಮೇದ ಶಿಖರ್ಜಿ ಪ್ರದೇಶವನ್ನು ಅಲ್ಲಿನ ಸರ್ಕಾರ ಪ್ರವಾಸಿ ತಾಣವನ್ನಾಗಿ ಮಾಡಲು ಹೊರಡಿಸಿದ ಆದೇಶದ ವಿರುದ್ಧ ದ.ಕ ಮತ್ತು ಉಡುಪಿ ಜಿಲ್ಲೆಯ ಜೈನ ಸಮಾಜದವರಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಜಾಥ ನಡೆಯಿತು.

ಜೈನ ಮಠದ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ ಸಾವಿರ ಕಂಬ ಬಸದಿ ಆವರಣದಿಂದ ಮುಖ್ಯ ರಸ್ತೆಯ ಮೂಲಕ ಆಡಳಿತ ಸೌಧದವರೆಗೆ ದ.ಕ, ಉಡುಪಿ ಜಿಲ್ಲೆಯ ಸಾವಿರಾರು ಜೈನ ಸಮಾಜದವರು ಮೌನ ಪ್ರತಿಭಟನೆ ನಡೆಸಿದರು.

ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ, ಸಮ್ಮೇದ ಶಿಖರ್ಜಿ ಜೈನರ ಪವಿತ್ರ ಕ್ಷೇತ್ರವಾಗಿದ್ದು 24 ತೀರ್ಥಂಕರರ ಪೈಕಿ ತೀರ್ಥಂಕರರು ಇಲ್ಲಿ ತಪಸ್ಸು ಮಾಡಿ ಸಿದ್ಧಿ ಪ್ರಾಪ್ತಿ ಹೊಂದಿದ ಪುಣ್ಯ ಭೂಮಿ. ನಿತ್ಯ ಸಾವಿರಾರು ಜೈನರು ಶ್ರದ್ಧಾ ಭಕ್ತಿಯಿಂದ ಕ್ಷೇತ್ರದ ದರ್ಶನ ಮಾಡಿ ಪುನೀತರಾಗುತ್ತಿದ್ದಾರೆ. ಇಂತಹ ಪವಿತ್ರ ಕ್ಷೇತ್ರವನ್ನು ಜಾರ್ಖಂಡ ಸರ್ಕಾರ ಪ್ರವಾಸಿ ತಾಣವಾಗಿಸಲು ತೀರ್ಮಾನ ಕೈಗೊಂಡಿರುವುದು ಅಲ್ಪ ಸಂಖ್ಯಾತ ಜೈನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದಂತಾಗಿದೆ‌ ಎಂದು ವಿರೋಧ ವ್ಯಕ್ತಪಡಿಸಿದರು. ದಬ್ಬಾಳಿಕೆಯನ್ನು ನಿಲ್ಲಿಸಿ ಪುಣ್ಯ ಭೂಮಿಯ ಪಾವಿತ್ರ್ಯತೆಯನ್ನು ರಕ್ಷಿಸಬೇಕು. ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಜಾರ್ಖಂಡ ಮುಖ್ಯಮಂತ್ರಿ, ರಾಷ್ಟ್ರಪತಿ, ಪ್ರಧಾಮಮಂತ್ರಿಯವರನ್ನು ಈ ಮೂಲಕ ಒತ್ತಾಯಿಸುತ್ತೇವೆ ಎಂದರು.

ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲ, ಚೌಟರ ಅರಮನೆಯ ಕುಲದೀಪ್ ಎಂ., ಮಾಜಿ ಸಚಿವ ಅಭಯಚಂದ್ರ ಜೈನ್, ಜೈನ್ ಮಿಲನ್ ವಲಯ ಅಧ್ಯಕ್ಷ ಪುಷ್ಪರಾಜ್ ಜೈನ್, ಬಸದಿಗಳ ಮೊಕ್ತೇಸರರಾದ ಪಟ್ಣಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್, ಆದರ್ಶ್, ಜೈನ ಸಮಾಜದ ಪ್ರಮುಖರಾದ ಕೆ.ಪಿ ಜಗದೀಶ್ ಅಧಿಕಾರಿ, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಅಭಿಜಿತ್ ಎಂ, , ಡಾ.ಮಹಾವೀರ ಜೈನ್, ನಮಿರಾಜ್, ಧನಕೀರ್ತಿ ಬಲಿಪ, ರಾಜವರ್ಮ ಬೈಲಂಗಡಿ, ಸುಭಾಶ್ಚಂದ್ರ ಚೌಟ, ಯತಿರಾಜ್ ಜೈನ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಕೃಷ್ಣರಾಜ ಹೆಗ್ಡೆ ಸ್ವಾಗತಿಸಿ ಮುನಿರಾಜ ರೆಂಜಾಳ ನಿರೂಪಿಸಿದರು. ಶೈಲೇಂದ್ರ ಕುಮಾರ್ ಪ್ರಾಸ್ತಾವಿ ಮಾತುಗಳನ್ನಾಡಿದರು. ಪದ್ಮಪ್ರಸಾದ್ ಜೈನ್ ಮನವಿ ಪತ್ರ ವಾಚಿಸಿದರು. ಪ್ರವೀಣ್‌ಚಂದ್ರ ಜೈನ್ ವಂದಿಸಿದರು.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago