News Karnataka Kannada
Monday, April 29 2024
ಮಂಗಳೂರು

ಮೂಡುಬಿದಿರೆ ಜನಸ್ಪಂದನೆ ಸಭೆ: 240 ಮಂದಿಗೆ ಹಕ್ಕುಪತ್ರ ವಿತರಣೆ

Moodbidri Janaspandana meeting: 240 people issued title deeds
Photo Credit : News Kannada

ಮೂಡುಬಿದಿರೆ: ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಕೆಲಸವನ್ನು ನಿರಂತರ ಮಾಡುತ್ತಾ ಬಂದಿದ್ದೇನೆ. ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಲು ನಿರಂತರ ಹೋರಾಟ ನಡೆಸಿದ್ದು ಕ್ಷೇತ್ರದಲ್ಲಿ ಡೀಮ್ಡ್ ವಿರಹಿತವಾದ 2400 ವಂದಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಮೂಡುಬಿದಿರೆ ಕನ್ನಡಭವನದಲ್ಲಿ ಮಂಗಳವಾರ ನಡೆದ ಪುರಸಭಾ ವ್ಯಾಪ್ತಿಯ ಜನಸ್ಪಂದನ ಸಭೆಯಲ್ಲಿ 240 ಮಂದಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಕರಾವಳಿ ಭಾಗದ ಪ್ರಮುಖ ಬೇಡಿಕೆಯಾದ ಕುಮ್ಕಿ ಜಮೀನಿನ ಹಕ್ಕು ನೀಡುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು ಇದಕ್ಕೂ ಪರಿಹಾರ ಸಿಗಲಿದೆ ಎಂದರು.

ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷ ಸುಜಾತ ಶಶಿಕಿರಣ್, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಕೆಎಂಎಫ್ ಅಧ್ಯಕ್ಷ ಕೆ.ಪಿ ಸಚರಿತ ಶೆಟ್ಟಿ, ಪುರಸಭೆ ವಿಪಕ್ಷ ನಾಯಕ ಪಿ.ಕೆ ಥೋಮಸ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಶಕುಂತಳಾ ದೇವಾಡಿಗ, ರಾಜೇಶ್ ನಾಯ್ಕ್, ಮುಖ್ಯಾಧಿಕಾರಿ ಇಂದು ಎಂ. ಉಪಸ್ಥಿತರಿದ್ದರು.

36 ಮಂದಿಗೆ ಪಿಂಚಣಿ ಪತ್ರ ಹಾಗೂ ಕಾರ್ಮಿಕ ಇಲಾಖೆಯಿಂದ ಕಿಟ್‌ಗಳನ್ನು ವಿತರಿಸಲಾಯಿತು. ತಹಸೀಲ್ದಾರ್ ಸಚ್ಚಿದಾನಂದ ಸತ್ಯಪ್ಪ ಕುಚನೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪತಹಸೀಲ್ದಾರ್ ರಾಮ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು