ಮಂಗಳೂರು

ಮೂಡುಬಿದಿರೆ: ಸಾವಿರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಸ್ವರಾಜ್ಯ ಮೈದಾನದಲ್ಲಿ ಮಹಮ್ಮಾಯಿ ದೇವರ ದರ್ಶನ ಪಡೆದ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪಿನಲ್ಲಿ ಸಾಗಿ ಬಂದರು. ಬಳಿಕ ಚುನಾವಣೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಇದಕ್ಕು ಮೊದಲು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೆ ಪ್ರಮುಖ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ ಎಂದರು.

ಅಭಯಚಂದ್ರ ಕೃಷ್ಣನಾದರೆ ನಾನು ಅರ್ಜುನ ಈ ಬಾರಿಯ ಚುನಾವಣೆಯಲಿ ನನ್ನ ರಾಜಕೀಯ ಗುರು ಅಭಯಚಂದ್ರ ಕೃಷ್ಣನ ಪಾತ್ರ ನಾನು ಅರ್ಜುನನ ಪಾತ್ರ ನಿರ್ವಸುತ್ತೇನೆ. ನಮ್ಮೊಳಗೆ ವೈಮನಸ್ಸು ಉಂಟಾಗಿದೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಘಟನೆ ನಡೆದಿಲ್ಲ, ಮುಂದೆಯೂ ಆಗುವುದಿಲ್ಲ. ಕ್ಷೇತ್ರಕ್ಕೆ ಅಭಯಚಂದ್ರರ ಕೊಡುಗೆಯನ್ನು ಯಾರೂ ಮರೆಯುವಂತಿಲ್ಲ. ಮೂಡುಬಿದಿರೆ-ಮುಲ್ಕಿಯನ್ನು ಮಾದರಿಯನ್ನಾಗಿಸುವ ಸಂಕಲ್ಪ ಮಾಡಿದ್ದೇನೆ, ಜನತೆ ಆಶೀರ್ವದಿಸಬೇಕೆಂದು ವಿನಂತಿಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಎಂಎಲ್‍ಸಿ ಹರೀಶ್ ಕುಮಾರ್, ಶಾಸಕ ಯು.ಟಿ ಖಾದರ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್, ದೇವಿಪ್ರಸಾದ್ ಶೆಟ್ಟಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಮಮತ ಗಟ್ಟಿ, ಶಾಲೆಟ್ ಪಿಂಟೊ, ಸುಪ್ರಿಯಾ ಡಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

15 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

25 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

38 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago