News Karnataka Kannada
Thursday, May 09 2024
ಮಂಗಳೂರು

ಮೂಡುಬಿದಿರೆ: ಹಲವು-ಹಣ್ಣುಗಳ ಮೇಳಕ್ಕೆ ಚಾಲನೆ

Moodbidri: Multi-fruit fair launched
Photo Credit : News Kannada

ಮೂಡುಬಿದಿರೆ: ನಿರುದ್ಯೋಗಿಗಳಿಗೆ ಕೃಷಿ ತರಬೇತಿ, ಗೌರವಧನ ನೀಡಿ ಕೃಷಿ ಮಾಡಲು ಭೂಮಿಯನ್ನು ಒದಗಿಸಬೇಕು. ಅದು ದೇಶದ ಆಹಾರ ಮತ್ತು ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರವಾಗಲಿದೆ ಎಂದು ಮೂಡುಬಿದಿರೆ ಜೈನ ಮಠದ ಸ್ವಾಮೀಜಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಹಲಸು-ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ಹಮ್ಮಿಕೊಳ್ಳಲಾದ ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಸಮೃದ್ಧಿಯನ್ನು ಮೋಹಿನಿ ಅಪ್ಪಾಜಿ ನಾಯ್ಕ್ ಸಭಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಹಲಸು ಹಣ್ಣುಗಳ ರಾಜ, ಬಡವರಿಗೆ ಹಲಸೇ ಕಲ್ಪವೃಕ್ಷ. ಹಲಸಿನ ಖಾದ್ಯಗಳು ತುಳುನಾಡಿನ ವೈಶಿಷ್ಟö್ಯವಾಗಿವೆ. ದೇಶಿ ಹಣ್ಣು ಹಂಪಲು ರುಚಿಕರ ಮಾತ್ರವಲ್ಲ ಆರೋಗ್ಯಕರ. ಸಾತ್ವಿಕ ಆಹಾರಗಳು ಮನಸ್ಸನ್ನು ಪ್ರಫುಲ್ಲಗೊಳಿಸುತ್ತವೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, ನಾವು ಏನೇ ಕೆಲಸ ಮಾಡಿದರೂ, ಸಮಾಜ ಮತ್ತು ಭವಿಷ್ಯದ ದೃಷ್ಟಿಯಿದ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಪರಿಕಲ್ಪನೆಯ ಸಮೃದ್ಧಿಮೇಳವನ್ನು ಹಮ್ಮಿಕೊಳ್ಳಲಾಗಿದೆ. ಡಾ.ಎಲ್.ಸಿ. ಸೋನ್ಸ್ ಅವರ ಹೆಸರು ಚಿರಸ್ಥಾಯಿ ಮಾಡುವುದು ನಮ್ಮೆಲ್ಲರ ಆಶಯ ಎಂದರು.

ಡಾ.ಎಲ್.ಸಿಸೋನ್ಸ್ ಅವರ ಪತ್ನಿ ಬೆನಿಟಾ ಸೋನ್ಸ್, ಉದ್ಯಮಿ ಕೆ.ಶ್ರೀಪತಿ ಭಟ್, ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಬ್ಯಾಂಕ್‌ನ ವಿಶೇಷ ಕರ್ತವ್ಯ ಅಧಿಕಾರಿ ಚಂದ್ರಶೇಖರ್ ಎಂ., ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಎಸ್‌ಕೆಡಿಆರ್‌ಡಿಪಿ ನಿರ್ದೇಶಕ ಮಹಾಬಲ ಕುಲಾಲ್, ಧನಕೀರ್ತಿ ಬಲಿಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಸತೀಶ್, ಬ್ರಹ್ಮಾವರ ಕೆವಿಕೆ ಮುಖ್ಯಸ್ಥ ಡಾ.ಬಿ ಧನಂಜಯ, ಹಿರಿಯ ಕೃಷಿ ವಿಜ್ಞಾನಿ ರವಿರಾಜ್ ಶೆಟ್ಟಿ, ಕೃಷಿ ಸಲಹಾ ಸಮಿತಿ ಸದಸ್ಯ ರಾಜವರ್ಮ ಬೈಲಂಗಡಿ, ತುಳುಕೂಟ ಅಧ್ಯಕ್ಷ ಧನಕೀರ್ತಿ ಬಲಿಪ, ಮಂಗಳೂರು ಕೆವಿಕೆ ಮಾಜಿ ಮುಖ್ಯಸ್ಥ ಸುಭಾಶ್ಚಂದ್ರ ಚೌಟ ಉಪಸ್ಥಿತರಿದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಚಾರ ಸಂಕಿರಣ, ಸಂವಾದ
ಜುಲೈ 15 ರಂದು 10 ಗಂಟೆಗೆ ಹಣ್ಣು ಮತ್ತು ತರಕಾರಿಗಳ ಮೌಲ್ಯವರ್ಧನೆ ಮತ್ತು ಸಂರಕ್ಷಣೆ ಕುರಿತು ವಿಚಾರ ಸಂಕಿರಣ ನಡೆಯಲಿದ್ದು ಕೊಪ್ಪದ ಪ್ರಗತಿಪರ ಕೃಷಿ ಉತ್ಪನ್ನ ತರಬೇತುದರರಾದ ಸುಮಾ ರಂಗಪ್ಪ ಮಾಹಿತಿ ನೀಡುವರು. 11 ಗಂಟೆಗೆ ಸಖರಾಯಪಟ್ಟಣದ ಹಲಸಿನ ಹಣ್ಣಿನ ಉತ್ಪನ್ನಗಳ ತರಬೇತುದಾರ ಶಿವಣ್ಣ ಹಲಸಿನ ಹಣ್ಣಿನ ಮೌಲವರ್ಧನೆ ಹಾಗೂ ಸಂರಕ್ಷಣೆಯ ವಿಧಾನಗಳ ಕುರಿತು ಉಪನ್ಯಾಸ ನೀಡುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು