Categories: ಮಂಗಳೂರು

ಮೂಡುಬಿದಿರೆ: ಪಣಪಿಲದಲ್ಲಿ ಜಯ -ವಿಜಯ ಜೋಡುಕರೆ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವನ್ನು ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಅವರು ಊರಿನ ದೈವಸ್ಥಾನ ಮತ್ತು ದೇವಸ್ಥಾನಗಳ ಪ್ರಸಾದ ಮತ್ತು ತೀರ್ಥವನ್ನು ಕರೆಗೆ ಹಾಕಿ ನಂತರ ದೀಪ ಬೆಳಗಿಸಿ ಶನಿವಾರ ಸಂಜೆ ಉದ್ಘಾಟಿಸಿ ಶುಭ ಹಾರೈಸಿದರು.

ಪಣಪಿಲ ಕಂಬಳ ಸಮಿತಿಯ ಗೌರವಾಧ್ಯಕ್ಷ ಶಾಸಕ ಉಮಾನಾಥ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಅಳಿಯೂರು ಕಂಬಳ ಸಮಿತಿಯ ಅಧ್ಯಕ್ಷ ಯುವರಾಜ್ ಹೆಗ್ಡೆ ನಂದೊಟ್ಟು, ಕಾರ್ಯಧ್ಯಕ್ಷ ಸುಭಾಶ್ಚಂದ್ರ ಚೌಟ, ಮಜಲೋಡಿಗುತ್ತು ಪ್ರಮೋದ್ ಆರಿಗ, ಅಳಿಯೂರು ಧರೆಗುಡ್ಡೆ ಗ್ರಾ.ಪಂನ ಅಧ್ಯಕ್ಷೆ ತುಳಸಿ ಮೂಲ್ಯ, ಉಪಾಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಸದಸ್ಯರಾದ ಮುನಿರಾಜ ಹೆಗ್ಡೆ, ಸಂತೋಷ್ ಪೂಜಾರಿ, ಜನಿತಾ, ದೀಕ್ಷಿತ್ ಪಣಪಿಲ ನೆಲ್ಲಿಕಾರು ಗ್ರಾ.ಪಂ.ಅಧ್ಯಕ್ಷೆ ಸುಶೀಲ, ಮೂಡುಬಿದಿರೆ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಜಿಲ್ಲಾ ಕಂಬಳ ಅಕಾಡೆಮಿಯ ಸಂಚಾಲಕ ಗುಣಪಾಲ ಕಡಂಬ, ಅಳಿಯೂರು ಹೇಮಾ ರೈಸ್ ಮಿಲ್ ನ ಮಾಲಕರಾದ ಹೇಮಾ ಮತ್ತು ಕೆ.ಕೆ.ಪೂಜಾರಿ, ಇಟಲ ಸೋಮನಾಥೇಶ್ವರ ದೇವಸ್ಥಾನದ ಕಾರ್ಯಾಧ್ಯಕ್ಷ ಸುಕೇಶ್ ಶೆಟ್ಟಿ, ಉದ್ಯಮಿ ಪ್ರೇಮ್ ಕುಮಾರ್ ಜೈನ್, ಕಂಬಳದ ಕೋಣಗಳ ಯಜಮಾನ ರಂಜಿತ್ ಪೂಜಾರಿ, ಕಂಬಳ ಸಮಿತಿಯ ಉಪಾಧ್ಯಕ್ಷರುಗಳಾದ ರಮನಾಥ ಸಾಲ್ಯಾನ್, ರವಿ ಪೂಜಾರಿ, ಪ್ರವೀಣ್ ಕೋಟ್ಯಾನ್, ಜೊತೆ ಕಾರ್ಯದರ್ಶಿ ಯೋಗೀಶ್ ನಂದೊಟ್ಟು, ಕೋಶಾಧಿಕಾರಿ ಜಯಚಂದ್ರ ಎನ್ ಸದಸ್ಯ ಸಚಿನ್ ಪಣಪಿಲ, ಕಂಬಳದ ಮಾರ್ಗದರ್ಶಕರಾದ ವಿಜಯಕುಮಾರ್ ಕಂಗಿನ ಮನೆ ಉಪಸ್ಥಿತರಿದ್ದರು.

ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಸ್ವಾಗತಿಸಿದರು. ಗಣೇಶ್ ಬಿ.ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago