ಮಂಗಳೂರು: ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಸಾಮಾನ್ಯವಾಗಿದೆ. ಇದೀಗ ಮತ್ತೆ ನೈತಿಕ ಪೊಲೀಸ್ಗಿರಿ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಘಟನೆ ನಡೆದಿದ್ದು, ಯುವಕ-ಯುವತಿಯನ್ನ ತಡೆದು ಹಲ್ಲೆಗೆ ಯತ್ನಿಸಲಾಗಿದೆ. ವಾರದ ಹಿಂದೆ ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ. ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.