Categories: ಮಂಗಳೂರು

ಕರೆಂಟ್‌ ಬಿಲ್‌ ಕಟ್ಟಬೇಡಿ ಎಂದು ಜನರಿಗೆ ಕರೆ ನೀಡಿದ ಸಂಸದ ನಳಿನ್‌

ಮಂಗಳೂರು: ಚುನಾವಣೆ ಪೂರ್ವದಲ್ಲಿ ಐದು ಉಚಿತ ಭರವಸೆ ಮೂಲಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಸರ್ಕಾರ ಬಂದು 24 ಗಂಟೆಯಲ್ಲಿ ಉಚಿತ ಭರವಸೆ ಈಡೇರಿಸುತ್ತೇವೆ ಎಂದು ಹೇಳಿದ್ದರು. ಇವತ್ತು 20 ದಿನ ಕಳೆದರೂ ಯಾವುದೇ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ. ಆದೇಶ ಮಾಡಿದ್ದರೂ ಈವರೆಗೆ ಯಾವಾಗಿಂದ ಬರುತ್ತದೆ ಎಂಬ ಉಲ್ಲೇಖ ಇಲ್ಲ. ಸುಳ್ಳು ಆಶ್ವಾಸನೆ ಕೊಟ್ಟು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಸಿದ್ದರಾಮಯ್ಯ ತನ್ನನ್ನೂ ಸೇರಿಸಿ ಉಚಿತ ಕರೆಂಟ್ ಅಂತ ಹೇಳಿದ್ದರು. ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂದು ಹೇಳಿದ್ದರು. ಅಲ್ಲದೆ ಯಾವುದೇ ಮಾನದಂಡ ಇಲ್ಲದೆ ಭಾಗ್ಯ ದೊರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದರು ಆದರೆ ಅವುಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ. ಜನ ಆಶ್ವಾಸನೆ ನಂಬಿ ಮತ ಹಾಕಿದ್ದಾರೆ, ಮತದಾರರು ಆಕ್ರೋಶದಲ್ಲಿ ಇದ್ದಾರೆ. ಕರೆಂಟ್ ಬಿಲ್ ಸಂಗ್ರಹಕ್ಕೆ ಬಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಯುತ್ತಿದೆ. ಹೀಗಾಗಿ ನಾನೂ ಕೂಡ ಕರೆಂಟ್‌ ಬಿಲ್‌ ನೀಡಬೇಡಿ ಎಂದು ಕರೆಕೊಡುತ್ತೇನೆ.

ಜನರ ಆಕ್ರೋಶ ಸಹಜ, ಯಾರೂ ಬಿಲ್ ಕಟ್ಟಲೇ ಬಾರದು ಎಂದರು. ಈ ವೇಳೆ ಜನರಿಗೆ ತೊಂದರೆಯಾದರೆ ನಾವು ಜನರ ಪರವಾಗಿ ನಿಲ್ಲುತ್ತೇವೆ ಎಂದರು. ನೌಕರರಿಗೆ ಹಲ್ಲೆಯಾದ್ರೆ ಸರ್ಕಾರವೇ ಹೊಣೆ ಎಂದು ತಿಳಿಸಿದರು. ಕಾಂಗ್ರೆಸ್ ನ ರಾಜನೀತಿಯಿಂದ ರಾಜ್ಯದಲ್ಲಿ ಅರಾಜಕತೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಪ್ರಾರಂಭ ಮಾಡಿದೆ. ಅಶ್ವಥ್ ನಾರಾಯಣ್ ಯಾವುದೋ ಸಂದರ್ಭ ನೀಡಿದ ಹೇಳಿಕೆಗೆ ಈಗ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ಇಟ್ಟುಕೊಂಡು ಕೇಸ್ ಮಾಡಿದ್ದಾರೆ. ಬಂಟ್ವಾಳದ ಮಾಣಿಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರ ಬದಲು ಹಲ್ಲೆಗೆ ಒಳಗಾದವರ ಮೇಲೆ ಕೇಸ್ ಹಾಕಿದ್ದಾರೆ. ಕಾಂಗ್ರೆಸ್ ಗೂಂಡಾಗಿರಿ ಹಾಗೂ ದ್ವೇಷದ ರಾಜಕಾರಣದ ಮೂಲಕ ವಿರೋಧ ಪಕ್ಷವನ್ನ ಮೆಟ್ಟಿ ನಿಲ್ಲಬಹುದು ಅಂದುಕೊಂಡಿದೆ. ಸಿದ್ದರಾಮಯ್ಯರ ತಾತಾ ಮುತ್ತಾತನೂ ಈ ಕೆಲಸ ಮಾಡಿ ಯಶಸ್ವಿಯಾಗಿಲ್ಲ. ಸಂವಿಧಾನಿಕ ಸರ್ಕಾರ ಕೆಲಸ ಮಾಡಬೇಕು, ಅದು ಬಿಟ್ಟು ದ್ವೇಷ ರಾಜಕಾರಣ ಬೇಡ. ಈ ಸರ್ಕಾರ ಹೆಚ್ಚು ದಿನ ಬಾಳಲ್ಲ, ಉಳಿಯುವುದಿಲ್ಲ. ಅಧಿಕಾರಿಗಳಿಗೆ ಒತ್ತಡ ಮತ್ತು ಭಯದ ವಾತಾವರಣದ ಮೂಲಕ ನಿಯಂತ್ರಣ ಹೇರುತ್ತಿದೆ.

ಸಿದ್ದರಾಮಯ್ಯ ಸರ್ಕಾರ 20 ಸಾವಿರ ಕೋಟಿ ಟೆಂಡರ್ ವಾಪಾಸ್ ಪಡೆದಿದೆ. 80 ಶೇ. ಕಮಿಷನ್ ಗೆ ಡಿಮ್ಯಾಂಡ್ ಇಡಲು ಈ ರೀತಿ ಮಾಡಿದ್ದಾರೆ. ಕಾಮಗಾರಿ ಪ್ರಾರಂಭವಾದ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಪರ್ಸೆಂಟೇಜ್ ಗಾಗಿ ಕಾಮಗಾರಿ ನಿಲ್ಲಿಸಿದ್ದಾರೆ, ಇದು 80 ಶೇ ಪರ್ಸಂಟೇಜ್‌ ಸರ್ಕಾರ ಎಂದರು. ನಮ್ಮ ಸರ್ಕಾರದ ಯಾವುದೇ ವಿಚಾರ ತನಿಖೆ ಮಾಡಿ ನಾವು ಸಿದ್ದರಾಗಿದ್ದೇವೆ. ಅದರ ಜೊತೆಗೆ ಲೋಕಾಯುಕ್ತದ ಸಿದ್ದರಾಮಯ್ಯ ಕೇಸ್ ಕೂಡ ತನಿಖೆ ಆಗಲಿ. ನಮ್ಮ‌ ಕಾಲಘಟ್ಟದ ಯಾವುದು ಬೇಕಾದ್ರೂ ತನಿಖೆ‌ ಅಗಲಿ. ಆದರೆ 20 ಸಾವಿರ ಕೋಟಿ ಬಗ್ಗೆ ಬಹಿರಂಗ ಪಡಿಸಿ ಎಂದು ಆಗ್ರಹಿಸಿದರು.

Gayathri SG

Recent Posts

ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಲ್ಲಿ ರಾಹುಲ್, ಅಮೇಠಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ರಾಯ್‌ ಬರೇಲಿ ಹಾಗೂ ಅಮೇಥಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ನೇಮಕ ಮಾಡಿದೆ. ಕಾಂಗ್ರೆಸ್‌ ನಾಯಕ ರಾಹುಲ್…

3 mins ago

ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ತಾಳಿ ಕಟ್ಟಿದ ಪತಿಯೇ ನಡು ರಸ್ತೆಯಲ್ಲೇ ಗಲಾಟೆ ತೆಗೆದು ಚಾಕುವಿನಿಂದ ಚುಚ್ಚಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ…

41 mins ago

ಮೈಸೂರಿನಲ್ಲಿಯೂ ಪ್ರಜ್ವಲ್‌ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ…

54 mins ago

ಪ್ರಜ್ವಲ್‌ ವಿಡಿಯೋ ಪ್ರಕರಣ, ನಾಡಿನ ಮಾನವನ್ನು ಹರಾಜು ಹಾಕಿದೆ: ಮಾರಸಂದ್ರ ಮುನಿಯಪ್ಪ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ…

1 hour ago

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಜನರನ್ನು ತಂಪಾಗಿಸಿದ ಮಳೆರಾಯ

ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ…

1 hour ago

ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು.

2 hours ago