Categories: ಮಂಗಳೂರು

ಮಂಗಳೂರು: ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೊಂಡಂತಿಲ ಗ್ರಾಮದ ತಾರಿಗುಡ್ಡ ಸೈಟ್ ಮನೆಯ ಮುಹಮ್ಮದ್ ಶರೀಫ್ (40) ಬಂಧಿತ ಆರೋಪಿ. 2023ರ ಜನವರಿ 15ರಂದು ಸಂಜೆ 6:30ರಿಂದ 16ರ ಬೆಳಗ್ಗೆ 9ರ ಮಧ್ಯೆ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯ ಎದುರಿನ ಬಾಗಿಲಿನ ಲಾಕನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈ ದಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತುಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು. ತನಿಖೆ ಕೈಗೊಂಡ ಸಿಸಿಬಿ ಎಸಿಪಿ ಪಿಎ ಹೆಗಡೆ ನೇತೃತ್ವದ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ 56,50,000 ರೂ, ಚಿನ್ನಾಭರಣಗಳು, ಮೊಬೈಲ್ ಫೋನ್ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು.

ಈ ಪ್ರಕರಣದ ಆರೋಪಿಗಳಿಗೆ ಮನೆಯನ್ನು ತೋರಿಸಿಕೊಟ್ಟ ಆರೋಪಿ ಮುಹಮ್ಮದ್ ಶರೀಫ್‌ನನ್ನು ಬಂಧಿಸಿ ಆತನಿಂದ ಚಿನ್ನದ ಪೆಂಡೆಂಟ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಆರೋಪಿಗಳು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

27 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

55 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

1 hour ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

1 hour ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

2 hours ago