Categories: ಮಂಗಳೂರು

“ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ” ಮುಡಿಗೆ ಪಿಲಿಪರ್ಬ- 2023 ರ ಕಿರೀಟ

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಗರದ ಕೇಂದ್ರ ಮೈದಾನದಲ್ಲಿ ನಡೆದ “ಕುಡ್ಲದ ಪಿಲಿಪರ್ಬ-2023” ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು,15 ತಂಡಗಳ ತೀವ್ರ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ, “ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ” ತಂಡವು ಪಿಲಿಪರ್ಬ- 2023 ರ ಕಿರೀಟ ಮುಡಿಗೇರಿಸಿಕೊಂಡಿತು.

ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ಪುರಲ್ದಪ್ಪೆನ ಮೋಕೆದ ಬೊಲ್ಲಿಲು ಪೊಳಲಿ ಟೈಗರ್ಸ್ ತಂಡವು ತೃತೀಯ ಸ್ಥಾನವನ್ನು ಅಲಂಕರಿಸಿತು. ಇನ್ನು ಪಿಲಿಪರ್ಬದ ವಿಶೇಷ ಬಹುಮಾನಗಳಾದ “ಕಪ್ಪು ಪಿಲಿ” ಪ್ರಶಸ್ತಿಯನ್ನು ಎಸ್.ಎಫ್.ಸಿ ಸೋಮೇಶ್ವರ ತಂಡ ಪಡೆದುಕೊಂಡರೆ, ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡವು “ಮರಿ ಹುಲಿ” ಪ್ರಶಸ್ತಿಯನ್ನು, ಬಹು ನಿರೀಕ್ಷಿತ ಪ್ರಶಸ್ತಿಯಾದ “ಪರ್ಬದ ಪಿಲಿ”ಯನ್ನು ಮಂಗಳೂರ್ ಫ್ರೆಂಡ್ಸ್ ಟೈಗರ್ಸ್ ಮುಳುಹಿತ್ಲು ಪಡೆದುಕೊಂಡಿತು. ಶಿಸ್ತಿನ ತಂಡವಾಗಿ ಶಿವಶಕ್ತಿ ಟೈಗರ್ ಕುಂಜತ್ತೂರು ಮಂಜೇಶ್ವರ ಹೊರ ಹೊಮ್ಮಿದರೆ, ಬಣ್ಣಗಾರಿಕೆಯಲ್ಲಿ ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡವು ಹೆಚ್ಚುಗಾರಿಕೆ ಪಡೆಯಿತು. ಮುಡಿ ವಿಭಾಗದಲ್ಲಿ ವಿ.ಸಿ.ಎಸ್, ಮೂಡುಶೆಡ್ಡೆ (ವಿಷ್ಣು ಪಿಲಿಕುಲು) ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಹಾಗೂ ತಾಸೆ ವಿಭಾಗದಲ್ಲಿ ಯಂಗ್ ಬಾಯ್ಸ್ ಮುಳುಹಿತ್ಲು ಮಂಗಳಾದೇವಿ ಹುಲಿ ತಂಡ ಎರಡೂ ಪ್ರಶಸ್ತಿಗಳನ್ನು ಬಾಚಿಕೊಂಡಿತು.

ಇದಕ್ಕೂ ಮೊದಲು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಸ್ಪರ್ಧಾಕೂಟಕ್ಕೆ ಚಾಲನೆ ನೀಡಿ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು.

ಹಿರಿಯರು, ಮಕ್ಕಳು, ಮಹಿಳೆಯರು ಸೇರಿದಂತೆ ಹಲವರು ಮೈದಾನದಲ್ಲಿ ಕಿಕ್ಕಿರಿದು ಅತ್ಯುತ್ಸಾಹದಿಂದ ಪಿಲಿಪರ್ಬದಲ್ಲಿ ಭಾಗವಹಿಸಿದ್ದು ಕಂಡು ಬಂದಿತು. ಹಲವು ಪುಟಾಣಿಗಳು ಹುಲಿ ವೇಷದಲ್ಲಿ ಕಂಗೊಳಿಸುತ್ತಿದ್ದದ್ದು ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಿತ್ತು.

ಕಾರ್ಯಕ್ರಮಕ್ಕೆ ವಿಶೇಷ ತಾರಾ ಮೆರುಗು ನೀಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನವು ತುಳುನಾಡಿನ ಮಣ್ಣಿನ ಸೊಗಡನ್ನು ಇಡೀ ನಾಡಿಗೆ ಪಸರಿಸುವ ಅದ್ಭುತ ಕಾರ್ಯವನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ಕಾರ್ಯ ಗಮನಾರ್ಹವಾದುದು. ಅವರ ಶ್ರಮ ಹಾಗೂ ಉತ್ಸಾಹದಿಂದಲೇ ಈ ಕಾರ್ಯಕ್ರಮ ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂದರು. ಇದೇ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಡಿಸಿಪಿ ಅಂಶು ಕುಮಾರ್, ನಟರಾದ ವಸಿಷ್ಟ ಸಿಂಹ, ಅರ್ಜುನ್ ಕಾಪಿಕಾಡ್, ಸೇರಿದಂತೆ ಹಲವು ಗಣ್ಯರು ಹುಲಿಗಳ ಕುಣಿತವನ್ನು ವೀಕ್ಷಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಪಿಲಿಪರ್ಬ-2023 ರ ಯಶಸ್ಸನ್ನು ಸಂಪೂರ್ಣವಾಗಿ ತುಳುನಾಡಿನ ಪವಿತ್ರ ಮಣ್ಣಿಗೆ ಅರ್ಪಿಸಿ ಇದಕ್ಕೆ ಸಹಕರಿಸಿದ ಸಮಸ್ತ ಜನತೆಗೆ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಧನ್ಯವಾದಗಳನ್ನು ಸಮರ್ಪಿಸಲಾಯಿತು.

Sneha Gowda

Recent Posts

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

6 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

10 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

20 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

26 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

47 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

48 mins ago