Categories: ಮಂಗಳೂರು

ಕದ್ರಿ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ: ಬ್ಯಾನರ್‌ ಅಳವಡಿಕೆ

ಮಂಗಳೂರು: ನಗರದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನ ಆಯ್ತು, ಇದೀಗ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರ್ಬಂಧ ವಿಧಿಸಲಾಗಿದೆ. ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಘಟನೆಗಳು ನಿರ್ಬಂಧದ ಬ್ಯಾನರ್‌ ಅಳವಡಿಸಿವೆ.

ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆ ಉಲ್ಲೇಖಿಸಿ ವಿಹಿಂಪ ಮತ್ತು ಬಜರಂಗದಳ ಬ್ಯಾನರ್‌ ಅಳವಡಿಸಿದೆ. ಕದ್ರಿ ವಿಶ್ವ ಹಿಂದೂ ಪರಿಷತ್‌ ಘಟಕದಿಂದ ದೇವಸ್ಥಾನದ ಪ್ರವೇಶದಲ್ಲೇ ಬ್ಯಾನರ್‌ ಅಳವಡಿಸಲಾಗಿದ್ದು, ಜ.15ರಿಂದ ಜ.25ರ ವರೆಗೆ ಕದ್ರಿ ಜಾತ್ರೋತ್ಸವ ನಡೆಯುತ್ತಿದೆ. ಈಗಾಗಲೇ ದೇವಸ್ಥಾನದ ರಸ್ತೆಯುದ್ದಕ್ಕೂ ಸ್ಟಾಲ್‌ಗಳನ್ನು ಅಳವಡಿಸಲಾಗಿದೆ.ವ್ಯಾಪಾರಕ್ಕೆ ಬಂದವರನ್ನು ವಾಪಸ್ ಕಳಿಸಲಾಗಿದೆ

ಕದ್ರಿ ಶ್ರೀಮಂಜುನಾಥ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದೆ. ಈ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದಾರೆ. ಅದರಂತೆ ಈ ಬಾರಿಯೂ ಮುಸ್ಲಿಂ ವ್ಯಾಪಾರಿಗಳು ಜಾತ್ರೆಯಲ್ಲಿ ವ್ಯಾಪಾರಕ್ಕೆ ಆಗಮಿಸಿದ್ದರು. ಆಗ ಅನ್ಯಧರ್ಮೀಯರನ್ನು ಬಜರಂಗದಳ ಕಾರ್ಯಕರ್ತರು ವಾಪಸ್‌ ಕಳುಹಿಸಿದ್ದಾರೆ.

ಕಳೆದ ವರ್ಷ ಅವಿಭಜಿತ ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದ ನಿಷೇಧದ ಬ್ಯಾನರ್ ಈ ವರ್ಷವೂ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಪ್ಪನಾಡು, ಉಡುಪಿ ಜಿಲ್ಲೆಯ ಕಾಪು, ಪೆರ್ಡೂರು ದೇವಸ್ಥಾನಗಳಲ್ಲಿ ಈ ರೀತಿಯ ಬ್ಯಾನರ್ ಗಳು ಕಾಣಿಸಿಕೊಂಡದ್ದು ವಿವಾದಕ್ಕೆ ಕಾರಣವಾಗಿತ್ತು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

7 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago