News Karnataka Kannada
Friday, May 03 2024
ಮಂಗಳೂರು

ವಿರೋಧ ಪಕ್ಷ ನಾಯಕನ ಆಯ್ಕೆ ವಿಚಾರ ಸೂಕ್ತ ಸಮಯದಲ್ಲಿ ನಿರ್ಧಾರ: ನಳಿನ್‌ ಕುಮಾರ್‌ ಕಟೀಲ್‌

Soujanya's death: BJP to hold protest in Belthangady on August 27
Photo Credit : News Kannada

ಪುತ್ತೂರು: ಕೇಂದ್ರ ನಾಯಕರು ವಿಧಾನಸಭಾ ವಿರೋಧ ಪಕ್ಷ ನಾಯಕನ ಆಯ್ಕೆ ವಿಚಾರ ನಿರ್ಧಾರ ಮಾಡುತ್ತಾರೆ. ಸೂಕ್ತ ಸಂದರ್ಭದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ 62 ಶಾಸಕರೂ ಕೂಡ ಸಮರ್ಥರಿದ್ದಾರೆ. ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಎಲ್ಲಾ ರೀತಿಯಲ್ಲೂ ಪ್ರಶ್ನಿಸುತ್ತಿದ್ದಾರೆ ಎಂದು ತಿಳಿಸಿದರು.

ಪುತ್ತೂರಿನಲ್ಲಿ ಬಿಜೆಪಿಗೆ ಅರುಣ್ ಪುತ್ತಿಲ ಬಣದ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಯಾರೆಲ್ಲಾ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂಬುದನ್ನು ಮುಂದಿನ‌ ದಿನಗಳಲ್ಲಿ‌ ನಿರ್ಧರಿಸಲಾಗುತ್ತದೆ.

ಪುತ್ತಿಲ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಗ್ರಾಮಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಕೂಡಾ ಚುನಾವಣೆಗೆ ಸ್ಪರ್ಧಿಸಬಹುದು. ಅದೇ ಆಧಾರದಲ್ಲಿ ಪುತ್ತಿಲ ಪರಿವಾರ ಕೂಡ ಸ್ಪರ್ಧೆ ನಡೆಸಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು