News Karnataka Kannada
Thursday, May 02 2024
ಮಂಗಳೂರು

ನಾವೂರ: ಗ್ರಾಮಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಭರ್ಜರಿ ಗೆಲುವು

Bantwal
Photo Credit : By Author

ಬಂಟ್ವಾಳ: ನಾವೂರ ಗ್ರಾಮಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದೆ.

ಕಳೆದ 20 ವರ್ಷಗಳಿಂದ ದೇವಶ್ಯಪಡೂರು ವಾರ್ಡ್ ನಲ್ಲಿ ಕಾಂಗ್ರೇಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಭೇರಿಯಾಗಿ ದಾಖಲೆ ಸೃಷ್ಟಿ ಸಿತ್ತು. ಈ ಬಾರಿ ಸಂಘಟಿತ ಹೋರಾಟದ ಫಲವಾಗಿ ನಾವೂರು ಗ್ರಾ.ಪಂ.ನ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಪ್ಪಿ ಅವರು 83 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಒಟ್ಟು 1070 ಮತಗಳು ಈ ವಾರ್ಡ್ ನಲ್ಲಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಪ್ಪಿ ಅವರಿಗೆ 475 ಮತಗಳು ಸಿಕ್ಕಿದರೆ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಸುಮಿತ್ರಮೋಹನ್ ಅವರಿಗೆ 392 ಮತಗಳು ಲಭಿಸಿದೆ, 5 ಅಸಿಂಧು ಮತಗಳು ಚಲಾವಣೆ ಆಗಿವೆ. ಈ ಬಾರಿಯ ಉಪಚುನಾವಣೆಯಲ್ಲಿ ದಾಖಲೆಯ ಒಟ್ಟು 872 ಮತಗಳು ಚಲಾವಣೆ ಆಗಿದೆ.

ದೇವಶ್ಯಪಡೂರು ವಾರ್ಡ್ ನ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜ್ಯೋತಿ ಅವರ ನಿಧನದ ಬಳಿಕ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಅವರ ಉಪಸ್ಥಿತಿಯಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ ದಿನೇಶ್ ಅವರು ಚುನಾವಣಾ ಅಧಿಕಾರಿಯಾಗಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸುಧಾಮಣಿ ಸಹಾಯಕ ಚುನಾವಣಾ ಅಧಿಕಾರಿ ಯಾಗಿ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ನಡೆಯಿತು.

ವಿಜೇತ ಅಭ್ಯರ್ಥಿ ಅಪ್ಪಿ ಅವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ರಾಜೇಶ್ ನಾಯ್ಕ್

ನಾವೂರ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಾಧಿಸಿದ್ದು, ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ರಾಜೇಶ್ ನಾಯ್ಕ್ ಅವರು ವಿಜೇತ ಅಭ್ಯರ್ಥಿ ಅಪ್ಪಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಸುದ್ದಿಗಾರರ ಜೊತೆ‌ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು ವಿಜೇತ ಅಭ್ಯರ್ಥಿ ಅಪ್ಪಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಕಳೆದ ಬಾರಿಯ ಚುನಾವಣೆಯಲ್ಲಿ ಸದ್ರಿ ವಾರ್ಡಿನಲ್ಲಿ 140 ಮತಗಳ ಹಿನ್ನಡೆ ಕಂಡಿದ್ದರು. ಆದರೆ ಈ ಬಾರಿ 83 ಮತಗಳ ಮುನ್ನಡೆ ಯೊಂದಿಗೆ ಜಯಗಳಿಸಿರುವುದು ಬಿಜೆಪಿಯ ಬಲ್ಯಾಡವನ್ನು ತೋರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು