News Karnataka Kannada
Monday, May 13 2024
ಮಂಗಳೂರು

ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಎನ್ ಡಿಎ ಗೆಲ್ಲಲಿದೆ: ಡಿ.ವಿ.ಸದಾನಂದ ಗೌಡ

sadananda gowda press meet
Photo Credit : News Kannada

ಮಂಗಳೂರು: 2024ರ ಲೋಕಸಭಾ ಚುನಾವಣೆ ಕುರಿತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರು ಹೇಳಿ ನೀಡಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೂಡ ಎನ್.ಡಿ.ಎ ಜೊತೆಗಿದೆ. ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳಲಿದೆ.

ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆ. ನರೇಂದ್ರ ಮೋದಿ ನೇತೃತ್ವದ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಅವರಿಂದ ಈ ದೇಶದಲ್ಲಿ ಅಭಿವೃದ್ಧಿಗೆ ಅರ್ಥ ಬಂದಿದೆ. ಬಿಜೆಪಿ ಪಕ್ಷ ನನಗೆ ಎಲ್ಲವನ್ನು ನೀಡಿದೆ ಎನ್ನುವುದು ಸತ್ಯ. ಎಂಎಲ್ಎ, ಎಂಪಿ, ಎಂಎಲ್ಸಿ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ, ರಾಜ್ಯ, ರಾಷ್ಟ್ರೀಯ ಹುದ್ದೆಗಳನ್ನು ನೀಡಿದೆ. ಇನ್ನು ನಾನು ಏನಾದರೂ ಪಕ್ಷಕ್ಕೆ ನೀಡಬೇಕಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು