Categories: ಮಂಗಳೂರು

ನೆಟ್ಟಾರು ಪತ್ನಿ ನೂತನ ಉದ್ಯೋಗದಿಂದ ಬಿಡುಗಡೆ ಆದೇಶ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಲಿದೆ.

ಕಳೆದ ಜುಲೈ 26 ರಾತ್ರಿ ಪ್ರವೀಣ್‌ ನೆಟ್ಟಾರು ಅವರ ಹತ್ಯೆಯಾಗಿತ್ತು. ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿ ಇದ್ದಾಗ ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಆಗಿನ ಸಿಎಂ ಬೊಮ್ಮಾಯಿ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ಸೆ.22ರಂದು ಆದೇಶ ಹೊರಡಿಸಲಾಗಿತ್ತು., ಆದರೆ ಅವರ ವಿನಂತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಕೆಳೆದ ಅಕ್ಟೋಬರ್‌ 14ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.

ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ಇದೀಗ ಸರಕಾರ ಬದಲಾಗಿದ್ದು, ನೂತನ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ವರದಿಯಾಗಿದೆ.

‘ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ತಮ್ಮನ್ನು ಮುಂದುವರೆಸಲು ನೂತನಕುಮಾರಿ ಅವರು ಕೋರಿದರೆ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

Gayathri SG

Recent Posts

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್…

2 mins ago

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಅರ್ಥಪೂರ್ಣವಾಗಿ ನಡೆದ ಆಟಿಸಂ ಜಾಗೃತಿ ʼಎಕ್ಷಪ್ಸನಲ್ 2024ʼ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ ಐಬ ಅಸೋಸಿಯೇಷನ್…

5 mins ago

ಮೋದಿ ಅವರೆ ನೀವಿನ್ನೂ ಮೌನವಾಗಿಯೇ ಇರುತ್ತೀರಾ?: ಪ್ರಿಯಾಂಕಾ ಗಾಂಧಿ ವಾದ್ರಾ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಈಗ ಎಲ್ಲೆಡೆ ಸದ್ದು ಮಾಡುತ್ತಿದ್ದು, ಇದನ್ನೇ ಕಾಂಗ್ರೆಸ್ ಪ್ರಮುಖ ಅಸ್ತ್ರವನ್ನಾಗಿ…

22 mins ago

ಮತದಾನ ಜಾಗೃತಿಗಾಗಿ: ಪಂಜಿನ ಮೆರವಣಿಗೆ ಜಾಥಾಗೆ ಚಾಲನೆ

ಮೇ 07 ರಂದು ನಡೆಯವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂದು…

45 mins ago

ಮಹಾದೇವ್ ಬೆಟ್ಟಿಂಗ್ ಆಪ್ ಅವ್ಯವಹಾರ: ನಟ ಸಾಹಿಲ್ ಖಾನ್ ಬಂಧನ

ಮಹಾದೇವ್ ಬೆಟ್ಟಿಂಗ್ ಆಪ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಸಾಹಿಲ್ ಖಾನ್ ಬಂಧನಕ್ಕೊಳಗಾಗಿದ್ದರೆ. ಈ ನಟನನ್ನು ಬಂಧಿಸಿರುವುದಾಗಿ ಪೊಲೀಸರು…

1 hour ago

ಪ್ರೀತಿ ಮಾಡಿ ಅತ್ತೆಯನ್ನೇ ಮದುವೆಯಾದ ಅಳಿಯ: ಜೈ ಅಂದ ಮಾವ

ವ್ಯಕ್ತಿಯೊಬ್ಬ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿರುವ ಘಟನೆ ಬಿಹಾರ ಬಂಕಾದ…

1 hour ago