Categories: ಮಂಗಳೂರು

ಮಂಗಳೂರು ನಗರದಲ್ಲಿ ಈ ಪ್ರದೇಶದಲ್ಲಿ ಹಾರ್ನ್‌ ಹಾಕುವಂತಿಲ್ಲ

ಮಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ನಗರದ ಕೆಲವು ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” ಎಂದು ಘೋಷಿಸಲಾಗಿದೆ.

ನಿಷೇಧಿತ ಪ್ರದೇಶಗಳ ವಿವರ: 1.ಲೇಡಿಗೋಷನ್ ಆಸ್ಪತ್ರೆಯ ಸುತ್ತುಮುತ್ತಲಿನ ಪ್ರದೇಶ :
*ರಾವ್ & ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ.
*ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್ ವರೆಗೆ.
*ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್ ವರೆಗೆ
2) ಹಂಪನಕಟ್ಟೆ ಜಂಕ್ಷನ್‌:
*ಹಂಪನಕಟ್ಟೆ ಜಂಕ್ಷನ್‍ನಿಂದ ಮಿಲಾಗ್ರಿಸ್ ಚರ್ಚ್ ವರೆಗಿನ ಪ್ರದೇಶ.
*ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್ (Causality Gate) ನಿಂದ ಮುತ್ತಪ್ಪ ಗುಡಿಯ ವರೆಗೆ.
*ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನ ಸೌಧ ಕಟ್ಟಡದ ವರೆಗೆ.
3) ಡಾ. ಅಂಬೇಡ್ಕರ್ ವೃತ್ತದ ಸುತ್ತಲಿನ ಪ್ರದೇಶ
* ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50 ಮೀಟರ್ ಪ್ರದೇಶ.
* ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
* ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
* ಬಾವುಟಗುಡ್ಡ (ಮಹಿಳಾ ಸಭಾ ಕಟ್ಟಡ) ದಿಂದ ಅಂಬೇಡ್ಕರ್ ವೃತ್ತದ ವರೆಗೆ.
4) ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್( ಅತ್ತಾವರ ನ್ಯೂ ರೋಡ್) ತಿರುವಿನವರೆಗೆ.
5) ದೇರಳಕಟ್ಟೆ ಯೇನಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ
6) ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ

ವಾಹನ ಚಾಲಕರು ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ.
ಭಾರತೀಯ ಮೋಟಾರು ವಾಹನ ಅಧಿನಿಯಮ (ತಿದ್ದುಪಡಿ) 2019 ರ ಕಲಂ 194 (ಎಫ್) ರಂತೆ ಹಾರ್ನ್ ನಿಷೇಧಿಸಿದ ಸಂಚಾರ ಸೂಚನಾ ಫಲಕ ಇರುವ ಪ್ರದೇಶದಲ್ಲಿ ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ 1000 ರೂ. ದಂಡವನ್ನು ಹಾಗೂ ಎರಡನೇಯ ಹಾಗೂ ತದನಂತರದ ಪ್ರತಿ ಉಲ್ಲಂಘನೆಗೆ 2000 ರೂ. ದಂಡವನ್ನು ವಿಧಿಸಲಾಗುವುದು ಎಂದು ಪೊಲೀಸ್‌ ಪ್ರಕಟನೆಯಲ್ಲಿ ತಿಳಿಸಿದೆ.

Ashika S

Recent Posts

ಯೆನೆಪೋಯದಲ್ಲಿ ದಕ್ಷಿಣ ಭಾರತ ಅಂತರ್ ಕಾಲೇಜು ಅಲೈಡ್ ಸ್ಪೋರ್ಟ್ಸ್ ಫೆಸ್ಟ್

ಸೌತ್ ಇಂಡಿಯಾ ಇಂಟರ್‌ಕಾಲೇಜಿಯೇಟ್ ಅಲೈಡ್ ಸ್ಪೋರ್ಟ್ಸ್ ಫೆಸ್ಟ್, ಮೇ 13 ರಿಂದ ಮೇ 16, 2024 ರವರೆಗೆ ಯೆನೆಪೊಯ ಸ್ಕೂಲ್…

13 mins ago

ಮೇ.19 ರಂದು 6ನೇ ತರಗತಿ ಪ್ರವೇಶಾತಿ ಪರೀಕ್ಷೆ

ಅಲ್ಪಸಂಖ್ಯಾತರ ಮೊರಾರ್ಜಿ ದೇಸಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ…

21 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಆರ್‌ಎಸ್ ಪಕ್ಷ ಹೋರಾಟ

ಹೆಣ್ಣು ಮಕ್ಕಳನ್ನು ತನ್ನ ಆಟದ ಸಾಮಾನೆಂದು ಬಳಸಿಕೊಂಡ ಪ್ರಜ್ವಲ್ ರೇವಣ್ಣ ಹಾಗೂ ಅವರ ಕುಟುಂಬಸ್ಥರ ಮೇಲೆ ಕಾನೂನಿನ ಕ್ರಮವನ್ನು ತೆಗೆದುಕೊಳ್ಳಬೇಕೆಂದುಕಳೆ…

31 mins ago

ಯಕ್ಷ ಧ್ರುವ ಪಟ್ಲ ಫೌಂಡೇಶನ್ : ಪಂಚಮ ವಾರ್ಷಿಕ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ)ನ ಮಂಗಳೂರು ನಗರ ಘಟಕದ ಪಂಚಮ ವಾರ್ಷಿಕ ಸಂಭ್ರಮವು ಮೇ 23 ಗುರುವಾರ…

32 mins ago

ರಫಾದಲ್ಲಿ ಇಸ್ರೇಲ್‌ ದಾಳಿ : ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

ಹಮಾಸ್‌ ವಿರುದ್ಧ ಇಂದಿಗೂ ಕದನ ವಿರಾಮ ಘೋಷಿಸಿದ ಇಸ್ರೇಲ್‌, ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಸತತವಾಗಿ…

43 mins ago

“ಕಾರು ಅಪಘಾತದಲ್ಲಿ ಮೃತಪಟ್ಟಿಲ್ಲ ಕಿರುತೆರೆ ನಟಿ ಪವಿತ್ರಾ”

ಕಿರುತೆರೆ ಪವಿತ್ರಾ ಕಾರು ಅಪಘಾತದಲ್ಲಿ ಮೃತಪಟ್ಟೇ ಇಲ್ಲ ಎಂದು ಗೆಳೆಯ ಚಂದು ಅವರು ಹೇಳಿದ್ದಾರೆ. ಅಲ್ಲಿ ನಡೆದಿದ್ದು ಏನು ಎಂಬುದನ್ನು…

1 hour ago