News Karnataka Kannada
Monday, April 29 2024
ಮಂಗಳೂರು

ಮಂಗಳೂರು: ನಿಷೇದಿತ ಮಾದಕ ದ್ರವ್ಯ ಬಳಕೆ ಪ್ರಕರಣದಲ್ಲಿ ಸರಿಯಾದ ತನಿಖೆ ನಡೆಸಿಲ್ಲ!

No proper investigation has been conducted in the case of banned drug use!
Photo Credit : News Kannada

ಮಂಗಳೂರು: ನಗರದಲ್ಲಿ ನಿಷೇದಿತ ಮಾದಕ ದ್ರವ್ಯ ಬಳಕೆ ಪ್ರಕರಣದಲ್ಲಿ ಸರಿಯಾದ ತನಿಖೆ ನಡೆಸದೆ ವಿದ್ಯಾರ್ಥಿಗಳನ್ನು ಮತ್ತು ವೈದ್ಯರನ್ನು ಬಂಧಿಸಲಾಗಿದೆ.

ಮಾದಕ ದ್ರವ್ಯ ‌ವ್ಯಸನಿಗಳ ಪುನರ್ವಸತಿಗೆ ಆದ್ಯತೆ ಕೊಡದೆ ಅವರ ಮಾನಹಾನಿಗೆ ಆದ್ಯತೆ ನೀಡಲಾಗಿದೆ ಎಂದು ವಕೀಲ ಹಾಗು ಮಂಗಳೂರು ಬಾರ್ ಅಸೋಸಿಯೇಶನ್ ಉಪಾಧ್ಯಕ್ಷ ಮನೋರಾಜ್ ರಾಜೀವ ಮತ್ತು ವಿಧಿ ವಿಜ್ಞಾನ ತಜ್ಞ ಡಾ. ಮಹಾಬಲೇಶ ಶೆಟ್ಟಿ ಆಪಾದಿಸಿದ್ದಾರೆ.

ಮಂಗಳೂರಿನಲ್ಲಿ ಜನವರಿ ೨೪, ಮಂಗಳವಾರದಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮಾದಕ ದ್ರವ್ಯ ವ್ಯಸನಿಗಳನ್ನು ಪೆಡ್ಲರ್ ಗಳೆಂದು ಬಿಂಬಿಸಲಾಗಿದೆ.ಅವರ ಭಾವಚಿತ್ರ, ಪೋಷಕರ ವಿವರಗಳನ್ನು ಮುದ್ರಣ ಮಾಡುವ ಮೂಲಕ ವಿದ್ಯಾರ್ಥಿಗಳು, ಪೋಷಕರು, ವೈದ್ಯರನ್ನು ಅವಮಾನಿಸಲಾಗಿದೆ. ಕಾನೂನು ಜಾರಿ ಏಜೆನ್ಸಿಗಳು ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಮಾದಕ ದ್ರವ್ಯ ಸೇವಿಸಿದ್ದರೆ ಅವರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಬೇಕಾಗಿತ್ತು. ಆದರೆ ಅವರನ್ನು ಬಂಧನದಲ್ಲಿಡಲಾಯಿತು. ಈ ಪ್ರಕರಣದಲ್ಲಿ ಅಮಾಯಕರನ್ನು ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಡ್ರಗ್ ಪೆಡ್ಲರ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ತಮ್ಮ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಕಾನೂನು ಜಾರಿ ಏಜೆನ್ಸಿಗಳು ಡ್ರಗ್ ಪೆಡ್ಲರ್ ಗಳು ಮತ್ತು ಮಾದಕ ದ್ರವ್ಯ ವ್ಯಸನಿಗಳನ್ನು ಸಮಾನವಾಗಿ ಪರಿಗಣಿಸಬಾರದು ಎಂದು ಹೇಳಿದರು.

ಮಾದಕ ದ್ರವ್ಯ ವ್ಯಸನಿಗಳನ್ನು ಬಂಧಿಸಿದರೆ ಅವರು ಆ ವ್ಯಸನವನ್ನು ತೊರೆಯುತ್ತಾರೆಯೇ ಎಂದು ಪ್ರಶ್ನಿಸಿದ ಅವರು ಮುಖ್ಯ ಆರೋಪಿ ಬಳಿಯಲ್ಲದೆ ಬೇರೆ ವಿದ್ಯಾರ್ಥಿಗಳ ಬಳಿಯಾಗಲಿ, ವೈದ್ಯರ ಬಳಿಯಲ್ಲಾಗಲೀ ಗಾಂಜಾ ದೊರೆತಿಲ್ಲ ಎಂಬುದರತ್ತ ಗಮನ ಸೆಳೆದರು.

ಈ ಪ್ರಕರಣದಲ್ಲಿ ಶಾಸಕರಾಗಲೀ, ಸಂಸದರಾಗಲೀ ಯಾಕೆ ಮಧ್ಯಪ್ರವೇಶ ಮಾಡಲಿಲ್ಲ ಎಂದು ಪ್ರಶ್ನಿಸಿದ ಅವರು ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಬೇಕು ಎಂದು ಆಗ್ರಹಿಸುವುದಾಗಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು