ಮಂಗಳೂರು: ಕೇರಳ ರಾಜ್ಯ ಮತ್ತು ಮಂಗಳೂರಿನಲ್ಲಿ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲದ ಹಸನ್ ಸಾದಿಕ್ ಅಲಿಯಾಸ್ ಬ್ಲೇಡ್ ಸಾದಿಕ್(35) ಬಂಧಿತ ಆರೋಪಿ.
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಹಸನ್ ಸಾದಿಕ್ ಬೆಂಗಳೂರಿನಿಂದ ಎಂಡಿಎಂಎ ಯನ್ನು ಖರೀದಿಸಿ ಮಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಈತನನ್ನು ಬಂಧಿಸಿದ್ದಾರೆ.
ಈತನಿಂದ ಒಟ್ಟು 50 ಗ್ರಾಂ ತೂಕದ 2,50,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.