News Karnataka Kannada
Monday, April 22 2024
Cricket
ಮಂಗಳೂರು

ಆರೋಗ್ಯಕರ ಸಮಾಜ ಕಟ್ಟಲು ಎನ್‌ಎಸ್‌ಎಸ್‌ ಪೂರಕ: ಹರೇಕಳ ಹಾಜಬ್ಬ

NSS helps build a healthy society: Harekala Hajabba
Photo Credit : News Kannada

ಮಂಗಳೂರು: ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ವೇದಿಕೆ ಎಂದು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಸಮಾಜ ಸೇವಕ ಹರೆಕಳ ಹಾಜಬ್ಬಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಂಜನಾಡಿಯಲ್ಲಿ ಮದನುಲ್ ಉಲೂಮ ಮದರಸದಲ್ಲಿ ನಡೆಯುತ್ತಿರುವ ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾಲಯ, ಯೆನೆಪೋಯ ಫಾರ್ಮಸಿ ಕಾಲೇಜು ಮತ್ತು ಯೆನೆಪೋಯ ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಜೂನ್‌ 26ರಂದು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕವಾಗಿ,ವ್ಯಕ್ತಿಗತವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ ವಿಜಯಕುಮಾರ್ ಮಾತನಾಡಿ, ಶಿಬಿರಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶಗಳನ್ನು ಮತ್ತು ಮೌಲ್ಯಗಳನ್ನು ಜೀವನದ ಉದ್ದಕ್ಕೂ ಪಾಲಿಸಬೇಕು ಮತ್ತು ಅಳವಡಿಸಿಕೊಂಡಲ್ಲಿ ಭವಿಷ್ಯದಲ್ಲಿ ಉಪಯೋಗಕ್ಕೆ ಬುರುತ್ತದೆ ಎಂದರು.

ಯೆನೆಪೋಯ ಫಾರ್ಮಸಿ ಕಾಲೇಜು ಪ್ರಿನ್ಸಿಪಾಲ್ ಡಾ. ಮೊಹಮ್ಮದ್ ಗುಲ್ಜಾರ್ ಅಹಮದ್ ವಿಶೇಷ ಶಿಬಿರದ ಸ್ವಾಗತಿಸಿದರು. ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲೀನಾ ಕೆ.ಸಿ ಅಧ್ಯಕ್ಷೀಯ ಭಾಷಣ ಮಾಡಿದರು. ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿಸಾಮಾಜಿಕ ಕಳಕಳಿ ಬೆಳೆಸುತ್ತದೆ. ಎರಡು ಕಾಲೇಜಿನ ವಿದ್ಯಾರ್ಥಿಗಳು ಗ್ರಾಮದ ಜನರ ಮನಸಿನಲ್ಲಿ ಉಳಿಯುವಂತಹ ಕಾರ್ಯ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.

ವೈದ್ಯಕೀಯ ಅಧೀಕ್ಷಕ ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಡಾ.ಹಬೀಬ್ ರಹಮಾನ್, ಎನ್ ಎಸ್ ಎಸ್ ಸಂಯೋಜಕಿ ಡಾ.ಅಶ್ವಿನಿ ಶೆಟ್ಟಿ, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ, ಯೆನೆಪೊಯ ದಂತ ಮಹಾವಿದ್ಯಾಲಯ ಡಾ. ಇಮ್ರಾನ್, ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೌಸರ್ ಬಾನು, ಡಾ. ರಮ್ಯಾ ಪಿ.ಡಿ.ಓ, ಸುರೇಖಾ ಶಾಲಾ ಮುಖ್ಯೋಪಾಧ್ಯಾಯಿನಿ, ಮದರಸ ಅಧ್ಯಕ್ಷ ಅಬ್ದುಲ್ ಹಮೀದ್, ಕಾರ್ಯದರ್ಶಿ ಮುನೀರ್, ಗ್ರಾಮ ಪಂಚಾಯತ್ ಸದಸ್ಯರು, ಕಾಲೇಜು ಮತ್ತು ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು. ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಮೊಹಮ್ಮದ್ ಆಸಿಫ್ ಶಿಬಿರವನ್ನು ಏರ್ಪಡಿಸಿದರು. ರೆನಿತಾ ಪ್ರಿಯಾ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು