ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಸೆ.9ರಂದು ಅಪರಾಹ್ನ 12ಕ್ಕೆ ಸರಿಯಾಗಿ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು.
ಸೆ.9ರಂದು ನಡೆಯುವ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಾರಂಭದಿಂದ ಮುಕ್ತಾಯವಾಗುವವರೆಗೆ ಯಾವುದೇ ಛಾಯಾ ಚಿತ್ರಣ ಮತ್ತು ವೀಡಿಯೋ ಚಿತ್ರೀಕರಣ ಮಾಡದಂತೆ ಎಲ್ಲಾ ಪತ್ರಿಕಾ ಮಾಧ್ಯಮದವರಿಗೆ ಸೂಕ್ತ ನಿರ್ದೇಶನ ನೀಡಿ ಸಹಕರಿಸುವಂತೆ ಕೋರಲಾಗಿದೆ.