Categories: ಮಂಗಳೂರು

ನೆಮ್ಮದಿಯ ಜೀವನ ಕಾಣಲು ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಸಾಧ್ಯ: ಪ್ರತಾಪ್‌ಸಿಂಹ ನಾಯಕ್

ಬೆಳ್ತಂಗಡಿ: ಬದುಕಿನಲ್ಲಿ ನೆಮ್ಮದಿಯ ಜೀವನ ಕಾಣಲು ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಸಾಧ್ಯ. ದೇವರು ಪ್ರತಿಯೊಬ್ಬರಿಗೂ ಅವಕಾಶವನ್ನು ಕೊಟ್ಟಿದ್ದಾನೆ ಅದನ್ನು ಬಳಸಿಕೊಳ್ಳುವ ರೀತಿಯಲ್ಲಿ ಅವನ ಯಶಸ್ಸು ಕಾಣುತ್ತದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಶಿಕ್ಷೆ ಎಂದು ಭಾವಿಸಬಾರದು ಶಿಕ್ಷಣ ಎಂಬುದು ಪ್ರತಿಭೆಯನ್ನು ಹೊರತರುವ ಸಾಧನವಾಗಿದೆ. ರತ್ನಮಾನಸಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಸುವ ಶಿಕ್ಷಣ ಸಿಗುತ್ತಿದ್ದು ಇಲ್ಲಿ ಅವಕಾಶ ಪಡೆದ ವಿದ್ಯಾರ್ಥಿಗಳು ಭಾಗ್ಯವಂತರು ಎಂದು ವಿಧಾನಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್ ಹೇಳಿದರು.

ಅವರು ಸೋಮವಾರ ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ರತ್ನಮಾನಸ ಜೀವನ ಶಿಕ್ಷಣ ವಸತಿ ನಿಯಲದ ೮ನೇ ತರಗತಿಗಳ ವಿದ್ಯಾರ್ಥಿಗಳ ಪ್ರವೇಶೋತ್ಸವ ಹಾಗೂ ಸೊಳ್ಳೆ ಪರದೆ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳು ಉತ್ಸಾಹದಿಂದ ವಿದ್ಯಾರ್ಥಿ ಜೀವನವನ್ನು ಕಳೆಯಬೇಕು. ಶ್ರೀಕ್ಷೇತ್ರ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳಲ್ಲಿ ಸುರಕ್ಷಿತ, ಸಂಸ್ಕಾರಯುತ ಸುಸಂಸ್ಕೃತಿಯ ಶಿಕ್ಷಣ ಸಿಗುತ್ತಿದ್ದು ತಮ್ಮ ಮಕ್ಕಳಿಗೆ ಇಲ್ಲಿ ಕಲಿಯಲು ಅವಕಾಶ ಸಿಕ್ಕಿರುವುದು ಭಾಗ್ಯ ಎಂದು ಪೋಷಕರು ತಿಳಿಯಬೇಕು ಎಲ್ಲರಿಗೂ ಈ ಭಾಗ್ಯ ಸಿಗಲು ಸಾಧ್ಯವಿಲ್ಲ. ರತ್ನಮಾನಸದ ವಾತಾವರಣ ಮನೆಯ ವಾತಾವರಣವನ್ನು ಮೀರಿಸಿದ ಅನುಭವ ವಿದ್ಯಾರ್ಥಿಗಳಿಗೆ ಸಿಗಲಿದೆ ಎಂದರು.

ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರೀಶ್ ಎಂ. ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರತ್ನಮಾನಸದಲ್ಲಿ ರೂಪಿಸಲಾಗುತ್ತದೆ. ಶಿಸ್ತು ಮತ್ತು ಸಂಸ್ಕಾರಯುತ ಶಿಕ್ಷಣ ಇಲ್ಲಿ ಸಿಗುತ್ತಿರುವುದರಿಂದ ಅನೇಕ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಕಾಣಬಹುದು. ನಾನು ಕೂಡ ರತ್ನಮಾನಸದ ವಿದ್ಯಾರ್ಥಿಯಾದ ಕಾರಣ ಈ ಒಂದು ಹುದ್ಧೆಗೆ ಬರಲು ಕಾರಣವಾಯಿತು. ಎಲ್ಲಾ ವಿದ್ಯಾರ್ಥಿಗಳು ಶ್ರೇಷ್ಠ ವ್ಯಕ್ತಿಗಳಾಗಿ ಬರಬೇಕು ಎನ್ನುವ ಕನಸನ್ನು ಕಾಣಿರಿ ಎಂದರು.

ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧ.ಮಂ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜನಾರ್ಧನ ಎಂ., ಎಸ್‌ಡಿಎಂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ, ಎಸ್‌ಡಿಎಂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಲಿತಾ, ಮಂಗಳೂರು ಕೀಟ ಶಾಸ್ತç ತಜ್ಞೆ ಮಂಜುಳ, ಆರೋಗ್ಯ ಇಲಾಖಾ ಹಿರಿಯ ನಿರೀಕ್ಷಕ ಸೋಮನಾಥ್, ಕಿರಿಯ ನಿರೀಕ್ಷಕ ಪ್ರದೀಪ್, ನಿಲಯಪಾಲಕ ಯತೀಶ್ ಬಳಂಜ, ಉಪಸ್ಥಿತರಿದ್ದರು.

ಸಹಪಾಲಕ ರವಿಚಂದ್ರ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಸಂತೋಷ್ ಸ್ವಾಗತಿಸಿ, ತೇಜಸ್ವಿ ವಂದಿಸಿದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

22 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

22 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

41 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

46 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

50 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

57 mins ago