Categories: ಮಂಗಳೂರು

ನಿರ್ವಹಣೆ ಇಲ್ಲದೆ ನಿಂತಲ್ಲೇ ನಿಂತಿವೆ ಪಶು ಸಂಜೀವಿನಿ ವಾಹನ

ಮಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 108 ಆ್ಯಂಬುಲೆನ್ಸ್‌ ಮಾದರಿಯಲ್ಲಿಯೇ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಜಾರಿ ಮಾಡಲಾದ ಪಶು ಸಂಜೀವಿನಿ ವಾಹನಗಳು (ರೈತರ ಮನೆಯ ಬಾಗಿಲಿಗೆ ಹೋಗಿ ಚಿಕಿತ್ಸೆ ನೀಡುವ ಯೋಜನೆ) ಎಲ್ಲಾ ಜಿಲ್ಲೆಯಲ್ಲಿ ನಿರ್ವಹಣೆ ಇಲ್ಲದೆ ನಿಂತಲ್ಲೇ ನಿಂತಿವೆ.

ಜಾನುವಾರು ಪಾಲಕರ ಮನೆ ಬಾಗಿಲಿಗೆ ಹೋಗಿ ಅಗತ್ಯ ಚಿಕಿತ್ಸೆ ನೀಡುವ ವ್ಯವಸ್ಥೆಯ ಪಶು ಸಂಜೀವಿನಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಅದರಂತೆ ಮತಕ್ಷೇತ್ರಕ್ಕೊಂದರಂತೆ ವಾಹನವನ್ನೂ ಸಹ ಒದಗಿಸಿದೆ. ನೂತನ ತಾಲೂಕುಗಳು ಸೇರಿದಂತೆ ಜಿಲ್ಲೆಯಲ್ಲಿ 13 ತಾಲೂಕುಗಳಿದ್ದು ಮತ್ತು ತಾಲೂಕಿನಲ್ಲಿ ಹೆಚ್ಚು ಕುರಿಗಳಿರುವುದರಿಂದ ಒಂದು ಹೆಚ್ಚಿನ ವಾಹನ ಸೇರಿದಂತೆ ಒಟ್ಟು 290 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ವಾಹನಗಳನ್ನು ಮಂಜೂರು ಮಾಡಲಾಗಿದೆ. ಆದರೆ, ಅವುಗಳಿನ್ನೂ ರೈತರ ಮನೆ ಬಾಗಿಲಿಗೆ ಹೋಗದೆ ನಿಂತಲ್ಲೇ ನಿಂತಿವೆ. ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಕಚೇರಿ ಆವರಣದಲ್ಲಿ ಮಳೆ ಗಾಳಿ ಬಿಸಿಲಿನ ಜೊತೆಗೆ ಧೂಳು ತಿನ್ನುತ್ತಿವೆ.

ಕಳೆದ ಒಂದೂವರೆ ತಿಂಗಳ ಹಿಂದೆಯೇ ಜಿಲ್ಲೆಗೆ ಸಂಚಾರಿ ಪಶು ಚಿಕಿತ್ಸಾ ವಾಹನಗಳು ಬಂದಿದ್ದರೂ ಇನ್ನೂ ರೈತರ ಮನೆ ಬಾಗಿಲಿಗೆ ಹೋಗದಿರುವುದು ವಿಪರ್ಯಾಸ ಪಶು ಆ್ಯಂಬುಲೆನ್ಸ್‌ ವಾಹನಗಳು1962 ಉಚಿತ ಟೋಲ್ ಫ್ರೀ ನಂಬರ್​ಗೆ ರೈತರು ಕರೆ ಮಾಡಿದರೆ ತಮ್ಮ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಮನೆ ಬಾಗಿಲಿಗೆ ಪಶು ವೈದ್ಯರ ಸಮೇತ ಬರುತ್ತೆ ಎಂದು ಸರ್ಕಾರ ಹೇಳಿದೆ.

ಆದರೆ, ಜಿಲ್ಲೆಗೆ ಬಂದಿರುವ ವಾಹನಗಳ ನೋಂದಣಿ ಮಾಡಿಸೋದು ಈ ವಿಳಂಬಕ್ಕೆ ಕಾರಣ ಎನ್ನಲಾಗುತ್ತಿದೆ ಜೊತೆಗೆ, ವಾಹನಗಳ ಉಸ್ತುವಾರಿ ಟೆಂಡರ್ ಕರೆಯದೆ ಯೋಜನೆ ಜಾರಿ ಮಾಡಲಾಗಿದೆಯಂತೆ. ಹೀಗಾಗಿ ವಾಹನಗಳ ನಿರ್ವಹಣೆ ಯಾರು ಮಾಡಬೇಕು ಅನ್ನೋ ಗೊಂದಲದಿಂದಾಗಿ ಈ ಸಮಸ್ಯೆ ಉಂಟಾಗಿದೆ. ವಾಹನ ನಿರ್ವಹಣೆ ಟೆಂಡರ್ ಪೂರ್ಣವಾದ ಬಳಿಕ ವಾಹನ ಹಸ್ತಾಂತರ ಮಾಡಲಾಗುವುದು ಎಂದು ಪಶುಸಂಗೋಪನಾ ಇಲಾಖೆಯ ವರದಿ ಮಾಡಿದೆ.

Ashika S

Recent Posts

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

39 seconds ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

18 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

45 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago