News Karnataka Kannada
Friday, May 10 2024
ಮಂಗಳೂರು

ಪರ್ಲೊಟ್ಟು: ಕಾರು, ಟಿಪ್ಪರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ. 
Photo Credit : By Author

ಬಂಟ್ವಾಳ: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ.

ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಘಟನೆಯಲ್ಲಿ ಇನ್ನೋವಾ ಕಾರಿನ ಮುಂಭಾಗ ನಜ್ಜು- ಗುಜ್ಜಾಗಿದೆ. ವಾಹನ ತೆರವುಗೊಳಿಸಿದ ಬಳಿಕ ಸಂಚಾರ ಆರಂಭಗೊಂಡಿತು. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ‌ ಸಂಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು