ಮಂಗಳೂರು

ಪಿಎಫ್‌ಐ ಜಿಲ್ಲಾ ಸಮಿತಿ‌ ಸದಸ್ಯ ಹೈದರ್ ನೀರ್ಸಾಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಜಿಲ್ಲಾ ಸಮಿತಿ ಸದಸ್ಯ, ಸಾಮಾಜಿಕ ಮುಂದಾಳು, ಸಂಘಟಕ ಹೈದರ್ ನೀರ್ಸಾಲ್(55) ಉಜಿರೆ ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸರಕಾರದ ಸಿಎಸ್‌ಸಿ ಆನ್ಲೈನ್ ಕೇಂದ್ರವನ್ನೂ ನಡೆಸುತ್ತಿದ್ದ ಅವರು ಸಿಎಸ್‌ಸಿ ವಿಎಲ್‌ಇ ಸೊಸೈಟಿ ಬೆಳ್ತಂಗಡಿ ಭಾಗದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ನಿರಂತರ ಕಾರ್ಯತತ್ಪರರಾಗಿಯೇ ಇರುತ್ತಿದ್ದ ಅವರು ಮಂಗಳವಾರ “ಗ್ರಾಮ ಒನ್” ಇದರ ಸಭೆಗಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ನಿನ್ನೆಯಿಂದ ಸಹಸ್ರಾರು ಮಂದಿ ಅವರ ಅಭಿಮಾನಿಗಳು, ಹಿತೈಷಿಗಳು ಅವರಿಗಾಗಿ ಪ್ರಾರ್ಥಿಸಿದರೂ ಬುಧವಾರ ಬೆಳಿಗ್ಗೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಶಿರ್ಲಾಲು ಮಸೀದಿ ಗೌರವಾಧ್ಯಕ್ಷರಾಗಿ, ತಾಲೂಕು ಮುಸ್ಲಿಂ‌ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.‌

ಮೃತರು ತಾಯಿ, ಪತ್ಮಿ, ಓರ್ವ ಗಂಡು, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago