News Karnataka Kannada
Monday, May 06 2024
ಮಂಗಳೂರು

ಅ. 22ರಂದು ಪುತ್ತೂರುದ ಪಿಲಿಗೊಬ್ಬು-2023, ಫುಡ್ ಫೆಸ್ಟ್ ಕಾರ್ಯಕ್ರಮ

Piligobbu-2023, Food Fest to be held on Oct. 22
Photo Credit : News Kannada

ಪುತ್ತೂರು: ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅ. 22ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ರಾಜ್ಯದ ಗಮನ ಸೆಳೆಯುವಂತಹ ಪುತ್ತೂರುದ ಪಿಲಿಗೊಬ್ಬು -2023 ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳಲಾಗಿದೆ ಎಂದು ಪುತ್ತೂರುದ ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 3 ವರ್ಷಗಳ ಹಿಂದೆ ಆರಂಭಗೊಂಡು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ವಿಜಯ ಸಾಮ್ರಾಟ್ ಪುತ್ತೂರು ಆಶ್ರಯದಲ್ಲಿ ಪ್ರಥಮ ಬಾರಿಗೆ ಈ ಅಭೂತಪೂರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 25 ಸಾವಿರಕ್ಕೂ ಮಿಕ್ಕಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪಿಲಿಗೊಬ್ಬು ಕಾರ್ಯಕ್ರಮದ ಉದ್ಘಾಟನೆಯು ಅ. 22 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಲಿದ್ದಾರೆ. ಪಿಲಿಗೊಬ್ಬು ವೇದಿಕೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ನೆರವೇರಿಸಲಿದ್ದು, ಪುತ್ತೂರಿನ ಹಿರಿಯ ವೈದ್ಯರಾದ ಡಾ. ಎಂ.ಕೆ. ಪ್ರಸಾದ್ ಭಂಡಾರಿ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.

ಪುತ್ತೂರುದ ಪಿಲಿಗೊಬ್ಬಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 10 ಹುಲಿವೇಷ ತಂಡಗಳನ್ನು ಆಹ್ವಾನಿಸಿ ಅವರೊಳಗೆ ಉತ್ತಮ ನಿರ್ವಹಣೆ ಮಾಡಿದ ತಂಡಕ್ಕೆ ಪ್ರಥಮ ಬಹುಮಾನ ರೂ. 3 ಲಕ್ಷ, ದ್ವಿತೀಯ ಬಹುಮಾನ 2 ಲಕ್ಷ ಹಾಗೂ ತೃತೀಯ ಬಹುಮಾನ 1 ಲಕ್ಷ ಹಾಗೂ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಗುವುದು. ಭಾಗಿಯಾದ ತಂಡಗಳಿಗೂ ಗೌರವ ಸಂಭಾವನೆಯನ್ನು ನೀಡಿ ಗೌರವಿಸಲಾಗುವುದು. ಜೊತೆಗೆ ಸಮಗ್ರ ತಂಡ ಪ್ರಶಸ್ತಿ, ಸಮಗ್ರ ಶಿಸ್ತಿನ ತಂಡ, ಗುಂಪು ಪ್ರಶಸ್ತಿ ವಿಭಾಗದಲ್ಲಿ ಉತ್ತಮ ತಾಸೆ, ಉತ್ತಮ ಬಣ್ಣ, ಉತ್ತಮ ಧರಣಿ ಮಂಡಲ ಕುಣಿತ, ವೈಯುಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಕಪ್ಪು ಹುಲಿ, ಮರಿ ಹುಲಿ, ಪುತ್ತೂರುದ ಹುಲಿ ಮುಡಿ ಹಾರಿಸುವುದು, ನಾಣ್ಯ ತೆಗೆಯುವುದಕ್ಕೆ ವಿಶೇಷ ಬಹುಮಾನವಿದೆ. ಪ್ರತಿ ತಂಡದಲ್ಲಿ 15 ಹುಲಿವೇಷ ಹಾಗೂ ಪ್ರತಿ ತಂಡಕ್ಕೆ ಹುಲಿ ವೇಷ ಕುಣಿತದ ಕಲಾ ಪ್ರದರ್ಶನ ನೀಡಲು 23 ನಿಮಿಷದ ಕಾಲಾವಕಾಶವಿರುತ್ತದೆ ಎಂದು ಮಾಹಿತಿ ನೀಡಿದರು.

ಕ್ಷೇತ್ರದಲ್ಲಿ ಉತ್ತಮ ಪರಿಣತಿ ಹೊಂದಿದ ಜಿಲ್ಲೆಯ ಖ್ಯಾತ ತೀರ್ಪುಗಾರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮ ವೀಕ್ಷಿಸಲು ತುಳುನಾಡಿನ ಹೆಸರಾಂತ ಕೋಸ್ಟಲ್ ವುಡ್ ಹಾಗೂ ರಾಜ್ಯದ ಹೆಸರಾಂತ ಸ್ಯಾಂಡಲ್‌ವುಡ್ ನಟ-ನಟಿಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅ. 21 ಸಂಜೆ 4 ಗಂಟೆಗೆ ಫುಡ್ ಫೆಸ್ಟ್ ಕಾರ್ಯಕ್ರಮದ ಉದ್ಘಾಟನೆಯನ್ನು ಶಂಕರ್ ಗ್ರೂಪ್‌ನ ಆಡಳಿತ ನಿರ್ದೇಶಕ ಸತ್ಯಶಂಕರ್ ಭಟ್ ನೆರವೇರಿಸಲಿದ್ದಾರೆ. ಆಹಾರ ಮೇಳವು ಅ. 21 ರ ಸಂಜೆ 4 ರಿಂದ ರಾತ್ರಿ 11ರ ತನಕ ಹಾಗೂ ಅ. 22ರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 11 ಗಂಟೆ ತನಕ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದರು.

ಪುತ್ತೂರು ಫುಡ್ ಫೆಸ್ಟ್ ವಿಶೇಷತೆ ಪಗೋಡ ಮಾದರಿಯ ಸುಂದರ ಸುಸಜ್ಜಿತ ಆಹಾರ ಮಳಿಗೆಯಲ್ಲಿ ಬರ್ಗರ್, ಸ್ಯಾಂಡ್ ವಿಚ್, ವಿವಿಧ ಬಗೆಯ ದೋಸೆಗಳು, ವಿವಿಧ ಬಗೆಯ ಐಸ್ ಕ್ರೀಮ್‌ಗಳು, ಮೊಕ್ ಟೈಲ್ ಜ್ಯೂಸ್, ಮಟ್ಕಾ ಸೋಡಾ, ಕರಾವಳಿಯ ರುಚಿಕರ ಖಾದ್ಯಗಳ ಸಹಿತ ನಲವತ್ತಕ್ಕೂ ಅಧಿಕ ವಿವಿಧ ಖಾದ್ಯಗಳ ಮಳಿಗೆಗಳು ವಿಜೃಂಭಿಸಲಿವೆ ಎಂದು ಅವರು ತಿಳಿಸಿದರು.

ವಿಶೇಷ ಆಕರ್ಷಣೆ ಕಲಾಭಿಮಾನಿಗಳಿಗೆ ಕಾರ್ನರ್‌ನಲ್ಲಿ ತಮ್ಮ ಭಾವಚಿತ್ರವನ್ನು ತಗೆದು ಸಂಭ್ರಮಿಸಲು ಆಕರ್ಷಕ ವಿನ್ಯಾಸದ ಸೆಲ್ಫಿ ಕಾರ್ನರ್ ರಚಿಸಲಾಗಿದೆ. ರಾಜಕೀಯ ರಹಿತವಾಗಿ ನಡೆಯುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ವಿನಂತಿಸಿದರು.

ಸುದ್ದಿಗೋಷ್ಠಿಯಲ್ಲಿ ಪುತ್ತೂರುದ ಪಿಲಿಗೊಬ್ಬು ಸಮಿತಿ ಸಂಚಾಲಕ ನಾಗರಾಜ ಭಟ್ ನಡುವಡ್ಕ, ಕಾಯಾಧ್ಯಕ್ಷ ಸುಜಿತ್ ರೈ ಪಾಲ್ತಾಡಿ, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು