Categories: ಮಂಗಳೂರು

ಮೋದಿಗೆ ಫಿಜಿ ದೇಶದ ಅತ್ಯುನ್ನತ ಪ್ರಶಸ್ತಿ: ಕಂಪಾನಿಯನ್‌ ಆಫ್‌ ದ ಆರ್ಡರ್‌ ಆಐ ಫಿಜಿ ಗೌರವ

ಪಪುವ ನ್ಯೂ ಗಿನಿಯ: ಪ್ರಧಾನಿ ನರೇಂದ್ರ ಮೋದಿಗೆ ಫಿಜಿ ದೇಶ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಕಂಪಾನಿಯನ್‌ ಆಫ್‌ ದ ಆರ್ಡರ್‌ ಆಐ ಫಿಜಿ ಪ್ರದಾನಿಸಿ ಗೌರವಿಸಿದೆ. ಫಿಜಿ ದೇಶದ ನಾಗರಿಕಲ್ಲದವರಿಗೆ ಈ ಪ್ರಶಸ್ತಿ ಸಿಗುವುದು ಬಹಳ ವಿರಳ ಎಂಬ ಕಾರಣಕ್ಕೆ ಈ ಅಪರೂಪದ ಗೌರವ ಬಹಳ ಮಹತ್ವ ಪಡೆದುಕೊಂಡಿದೆ. ಮೋದಿಯ ಜಾಗತಿಕ ನಾಯಕತ್ವವನ್ನು ಮೆಚ್ಚಿ ಫಿಜಿ ದೇಶ ಈ ಪ್ರಶಸ್ತಿ ನೀಡಿದೆ.

ಫಿಜಿ ಪ್ರಧಾನಿ ಸಿಟಿವೆನಿ ರಬುಕ ಇಂದು ಪಪುವ ನ್ಯೂ ಗಿನಿಯದಲ್ಲಿ ಪ್ರಶಸ್ತಿ ಪ್ರದಾನಿಸಿದರು. ಇದು ನನಗೆ ಸಿಕ್ಕಿರುವ ಗೌರವ ಅಲ್ಲ, ಭಾರತದ 140 ಕೋಟಿ ಪ್ರಜೆಗಳಿಗೆ ಭಾರತ-ಫಿಜಿ ದೇಶಗಳ ಶತಮಾನಗಳ ಸಂಬಂಧಕ್ಕೆ ಸಂದ ಗೌರವ ಎಂದು ಮೋದಿ ಪ್ರಶಸ್ತಿ ಸ್ವೀಕರಿಸಿ ಪ್ರತಿಕ್ರಿಯಿಸಿದ್ದಾರೆ. ಫಿಜಿ ದೇಶದ ಹೊರತಾದ ಕೆಲವೇ ಮಂದಿಗೆ ಮಾತ್ರ ಈ ಉನ್ನತ ಗೌರವ ಸಿಕ್ಕಿದೆ.

Gayathri SG

Recent Posts

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

44 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

53 mins ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

1 hour ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ…

2 hours ago