ಮಂಗಳೂರು

ಪೊಳಲಿ: ಆಳುಪ ದೊರೆ ಎರಡನೆಯ ಬಂಕಿದೇವನ‌ ಶಾಸನ ಅಧ್ಯಯನ

ಬಂಟ್ವಾಳ : ಇಲ್ಲಿನ ಕರಿಯಂಗಳ ಗ್ರಾಮದ ಕಲ್ಕುಟದ ದಾಮೋದರ ಸಪಲಿಗ‌ ಇವರ ಗದ್ದೆಯಲ್ಲಿರುವ ಶಾಸನವನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ‌ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ‌‌‌ ಮೂಡುಬೆಳ್ಳೆ ಮತ್ತು ತೃತೀಯ ಬಿ.ಎ ವಿದ್ಯಾರ್ಥಿಯಾದ ವಿಶಾಲ್ ರೈ.‌ ಕೆ ಅವರು ‌ಅಧ್ಯಯನಕ್ಕೆ ಒಳಪಡಿಸಿರುತ್ತಾರೆ.

ಕಣ (ಗ್ರಾನೈಟ್) ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಸುಮಾರು 3 ಅಡಿ ಎತ್ತರ, 2 ಅಡಿ ಅಗಲವನ್ನು‌ ಹೊಂದಿದೆ.‌ 13 ನೆಯ ಶತಮಾನದ ಕನ್ನಡ ಲಿಪಿ ‌ಮತ್ತು ಭಾಷೆಯಲ್ಲಿರುವ ಈ ಶಾಸನವು ಒಟ್ಟು 15 ಸಾಲುಗಳನ್ನು ಒಳಗೊಂಡಿದ್ದು, ಮುಂಭಾಗದಲ್ಲಿ 12 ಸಾಲು ಮತ್ತು ಶಾಸನದ ಎಡ ಬದಿಯಲ್ಲಿ 3 ಸಾಲುಗಳನ್ನು ನೋಡಬಹುದು.

ಸ್ವಸ್ತಿ ಶ್ರೀಮತು ಎಂದು ಆರಂಭಗೊಳ್ಳುವ ಈ ಶಾಸನವು ಕ್ರೋಧಿ ಸಂವತ್ಸರದ ಸಿಂಹಮಾಸ ಮೊದಲಾಗಿ 5ನೆಯ ಆ ಎಂದಿದ್ದು ಈ ಕಾಲಮಾನವು ಆಳುಪ ದೊರೆ 2ನೆಯ ಬಂಕಿದೇವನ (ಸಾ.ಶ.ವ. 1258-1315‌) ಆಳ್ವಿಕೆಯ ಕಾಲಕ್ಕೆ ಸರಿ ಹೊಂದುತ್ತದೆ. ಈ ಕಾಲಘಟ್ಟದಲ್ಲಿ ಆಳುಪ ದೊರೆ ಎರಡನೆಯ ಬಂಕಿದೇವನು ಮಂಗಳೂರು ರಾಜ್ಯವನ್ನು ಆಳ್ವಿಕೆ ಮಾಡುತ್ತಿದ್ದಾಗ ಬೊಮಣತಿಕಾರಿಯು ಪೊಳಲ (ಪ್ರಸ್ತುತ ಪೊಳಲಿ) ದೇವಾಲ್ಯದಲ್ಲಿ ಕಲ್ವುಟ (ಪ್ರಸ್ತುತ ಕಲ್ಕುಟ) ದ ಭೂಮಿಯಿಂದ ಪೊಳಲ ದೇವರಿಗೆ ಬಿಟ್ಟ ಗೇಣಿಯ ವಿವರವನ್ನು ಶಾಸನವು‌ ಉಲ್ಲೇಖಿಸುತ್ತದೆ. ಶಾಸನವು ಕೊನೆಯಲ್ಲಿ ಶಾಪಾಶಯ ವಾಕ್ಯದೊಂದಿಗೆ‌ ಕೊನೆಗೊಳ್ಳುತ್ತದೆ.

ಈ ಕ್ಷೇತ್ರಕಾರ್ಯ ಶೋಧನೆಯಲ್ಲಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ಮುಖ್ಯ ಗುಮಾಸ್ತ ಅರುಣ್ ಕುಮಾರ್, ವಿಜಿತಾ ಅಮೀನ್ ಮತ್ತು ಸ್ಥಳೀಯರಾದ ರೋಹಿತಾಕ್ಷ, ಸೂರಜ್ ಅವರು ಸಹಕಾರ ನೀಡಿರುತ್ತಾರೆ.

Ramya Bolantoor

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

9 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

9 hours ago