News Karnataka Kannada
Sunday, May 19 2024
ಮಂಗಳೂರು

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ: ಆಸ್ಪತ್ರೆಗೆ ಶಾಸಕ ಹರೀಶ್‌ ಪೂಂಜಾ ಭೇಟಿ

Police brutality on Hindu activists: Harish Poonja condemns inhuman act
Photo Credit : News Kannada

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದು, ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಾಯಾಳುಗಳನ್ನು ವಿಚಾರಿಸಿದ್ದಾರೆ.  ಬಳಿಕ ಹೇಳಿಕೆ ನೀಡಿದ್ದು, ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಯಾವ ರೀತಿ ಇದೆ ಅಂತ ಎಂಬುದನ್ನ ಸ್ಯಾಂಪಲ್ ರೀತಿಯಲ್ಲಿ ತೋರಿಸಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

ಈ ಬಗ್ಗೆ ಈಗಾಗಲೇ ದ.ಕ. ಜಿಲ್ಲಾ ಎಸ್ಪಿಗೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುಂತೆ ಒತ್ತಾಯಿಸಿದ್ದೇನೆ ಎಂದರು. ಯಾವ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ದೌರ್ಜನ್ಯ ಮಾಡಿದ್ದಾರೋ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಇಂದು ಸಂಜೆಯೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ, ಸಂಘ ಪರಿವಾರ ಸೇರಿದಂತೆ ಹಿಂದೂ ಸಮಾಜ ಹೋರಾಟ ಮಾಡ್ತಿವಿ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು