News Karnataka Kannada
Monday, April 29 2024
ಮಂಗಳೂರು

ಮಂಗಳೂರು: ರಿಸೈಕಲ್ ರೆಸ್ಟೋರೆಂಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸ್ ಕಮಿಷನರ್‌ ಶಶಿಕುಮಾರ್

Police Commissioner Sasikumar visited the recycle restaurant and inspected it.
Photo Credit : R Bhat

ಮಂಗಳೂರು, ಜು.26: ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ತಡೆ ವಿಚಾರವಾಗಿ, ಬಲ್ಮಠ ರಸ್ತೆಯಲ್ಲಿರುವ ರಿಸೈಕಲ್ ರೆಸ್ಟೋರೆಂಟ್‌ಗೆ ಇಂದು ಬೆಳಗ್ಗೆ ಪೊಲೀಸ್ ಕಮಿಷನರ್‌ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು‌ ವಿದ್ಯಾರ್ಥಿಗಳ ಅಶ್ಲೀಲ ವೀಡಿಯೊ ಪ್ರಕರಣಕ್ಕೂ ಪಬ್ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ ಕಮಿಷನರ್ ಶಶಿಕುಮಾರ್, ರಿಸೈಕಲ್ ರೆಸ್ಟೋರೆಂಟ್ ಪಬ್ ಬಹಳಷ್ಟು ವರ್ಷಗಳಿಂದ ಇದೆ. ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ಸಂಘಟನೆಗೆ ಸೇರಿದ ಐದಾರು ಹುಡುಗರು ಬಂದಿದ್ದಾರೆ. ಇಲ್ಲಿನ ಬೌನ್ಸರ್ ದಿನೇಶ್ ಗೆ ಮೈನರ್ ಹುಡುಗ-ಹುಡುಗಿ ಇದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಮ್ಯಾನೇಜರ್ ಒಳಗೆ ಹೋಗಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಸ್ಥಳೀಯ ಕಾಲೇಜಿನ ಕೆಲ ವಿದ್ಯಾರ್ಥಿಗಳು ಇದ್ದರು ಎಂದವರು ತಿಳಿಸಿದರು.

ಮ್ಯಾನೇಜರ್ ಹೊರಗೆ ಹೋಗಲು ಹೇಳಿದ ಬಳಿಕ ವಿದ್ಯಾರ್ಥಿಗಳು ಹೊರಗೆ ಹೋಗಿದ್ದಾರೆ. ಬೌನ್ಸರ್ ಹೇಳಿದ ಪ್ರಕಾರ ಸಂಘಟನೆಯ ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ. ಹೊರ ಭಾಗದಲ್ಲೇ ಮಾತನಾಡಿ ಹೋಗಿದ್ದಾರೆ. ಈ ಬಗ್ಗೆ ಸಿಸಿಟಿವಿ ಪರಿಶೀಲನೆ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.

ಪಬ್ ಮ್ಯಾನೇಜರ್ ಮತ್ತು ಬೌನ್ಸರ್ ಹೇಳಿಕೆ ಪಡೆಯಲಾಗಿದೆ. ಹೊರಗಿನ ವ್ಯಕ್ತಿಗಳು ಬಂದು ಈ ರೀತಿ ಐಡಿ, ಲೈಸೆನ್ಸ್ ಕೇಳಲು ಬೇರೆಯವರಿಗೆ ಅವಕಾಶ ಇಲ್ಲ. ಈ ಬಗ್ಗೆ ಪರಾಮರ್ಶೆ ಮಾಡಿ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಮೊನ್ನೆ ನಡೆದ ಕಾಲೇಜಿನ ವಿದ್ಯಾರ್ಥಿಗಳ ಅಶ್ಲೀಲ ವೀಡಿಯೊ ಪ್ರಕರಣ ವಿದ್ಯಾರ್ಥಿಗಳು ಮತ್ತು ಈ ಘಟನೆ ವಿದ್ಯಾರ್ಥಿಗಳಿಗೆ ಸಂಬಂಧ ಇಲ್ಲ. ಅಂತಿಮ ಪದವಿ ವಿದ್ಯಾರ್ಥಿಗಳು ಪಬ್ ಗೆ ಬಂದಿದ್ದರು‌. ಈ ಪಬ್ ನಲ್ಲಿ ಹಾಕಿರೋ ನಿಯಮದ ಪ್ರಕಾರ 21 ವರ್ಷದವರು ಬರಬಹುದು. ಹೀಗಾಗಿ ಈ ಬಗ್ಗೆ ಮಾಹಿತಿ ಕಲೆ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು