News Karnataka Kannada
Thursday, April 25 2024
Cricket
ಮಂಗಳೂರು

ಪೊಲೀಸ್ ಪೋನ್‌ ಇನ್‌: ಸೀಝ್‌ ಆದ ವಾಹನಗಳು ಸೊಳ್ಳೆ ಉತ್ಪತ್ತಿ ಕೇಂದ್ರವೆಂದು ದೂರು

Police phone-in: Seized vehicles complain ed of being a mosquito breeding hub
Photo Credit : News Kannada

ಮಂಗಳೂರು: ನಗರದ ಪೊಲೀಸ್‌ ಕಮಿಷನರ್‌ ಕುಲದೀಪ್‌ ಜೈನ್‌ ಅವರಿಂದ ಪೊಲೀಸ್ ಪೋನ್ ಇನ್ ಕಾರ್ಯಕ್ರಮ ನಡೆಯಿತು. ಶನಿವಾರ ಮುಂಜಾನೆ ೧೦ ಗಂಟೆಗೆ‌ ಆರಂಭಗೊಂಡ ಪೋನ್ ಇನ್ ಕಾರ್ಯಕ್ರಮಕ್ಕೆ ಭರ್ಜರಿ ಸ್ಪಂದನೆ ದೊರೆತಿದೆ.

ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿ ಸಾರ್ವಜನಿಕರಿಂದ ಕರೆ ಮಾಡಬೇಕೆಂದು ಆಯುಕ್ತರು ಹೇಳಿದ್ದರೂ ಪುತ್ತೂರಿನಿಂದ ಟ್ರಾಫಿಕ್ ಸಮಸ್ಯೆ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ಬಗ್ಗೆ ಎಸ್ಪಿ ಅವರಿಗೆ ತಿಳಿಸುವುದಾಗಿ ಆಯುಕ್ತರು ತಿಳಿಸಿದರು. ಮಂಗಳೂರು ನಗರದ ಬಿಜೈ ನಲ್ಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಹೆಚ್ಚಿನ ದೂರಿನ ಕರೆ ಸ್ವೀಕರಿಸಲಾಗಿದೆ. ವಾಹನದಲ್ಲಿ ಕರ್ಕಶ ಹಾರ್ನ್ ಬಳಕೆ ಬಗ್ಗೆ ಸಾರ್ವಜನಿಕರಿಂದ ದೂರು ನೀಡಿದರು. ನಗರದಲ್ಲಿ ಹೆಲ್ಮೆಟ್ ಇಲ್ಲದ ಬೈಕ್ ಚಾಲನೆ, ಬೈಕ್ ನಲ್ಲಿ ಕರ್ಕಶ ಸೈಲೆನ್ಸರ್ ಬಳಕೆ ಬಗ್ಗೆ ದೂರು ಸಲ್ಲಿಕೆಯಾಗಿದೆ.

ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೀಝ್ ಆಗಿರುವ ವಾಹನಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಕೇಂದ್ರಗಳಾಗುತ್ತಿವೆ ಎಂದು ಸಾರ್ವಜನಿಕರು ದೂರಿದರು. ಅಲ್ಲದೆ ಈ ವಾಹನಗಳಿಂದ ರಸ್ತೆ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ ಎಂದು ಸಮಸ್ಯೆ ಹೇಳಿಕೊಂಡರು. ಈ ಬಗ್ಗೆ ವಾಹನದಲ್ಲಿ ನೀರು ನಿಲ್ಲದಂತೆ ಪೊಲೀಸ್ ಠಾಣಾ ಸಿಬ್ಬಂದಿಗಳು ಶುಚಿಗೊಳುಸುವಂತೆ ಆಯುಕ್ತರು ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು