Categories: ಮಂಗಳೂರು

ಹಿಂದುಗಳ ವಿರುದ್ಧ ಸೇಡಿನ ರಾಜಕಾರಣ ಆರಂಭವಾಗಿದೆ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಡಿ.ಕೆ. ಶಿವಕುಮಾರ್‌ ಪೊಲೀಸರ ವಿರುದ್ಧ ನಿನ್ನೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರುವುದು ಕಂಡುಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ ಎಂದು ಹೇಳಿದರು.

ಇದು ಸರಿಯಲ್ಲ, ಅವರು ತಮ್ಮ ಮಾತನ್ನ ಪುನರ್ ಪರಿಶೀಲನೆ ಮಾಡಬೇಕು. ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಸರ್ಕಾರದಲ್ಲಿ ದ್ವೇಷ ಸಾಧಿಸೋ ವಾತಾವರಣ ಕಂಡು ಬರುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ. ಅದನ್ನ ಪುನರ್ ಪರಿಶೀಲಿಸಲಿ ಎಂದರು.

ಸಿದ್ದರಾಮಯ್ಯ ಮತ್ತು ಡಿಕೆಶಿ ಶೇ 40 ಕಮಿಷನ್ ತನಿಖೆ ಮಾಡ್ತೀವಿ ಅಂದಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ನಾನು ಸ್ವಾಗತ ಮಾಡುತ್ತೇನೆ. ಸಮಾಜ ಕಲ್ಯಾಣ, ಹಿಂದುಳಿದ ಇಲಾಖೆ ಮಂತ್ರಿಯಾಗಿದ್ದ ನನ್ನಿಂದಲೇ ತನಿಖೆ ಪ್ರಾರಂಭವಾಗಲಿ ಎಂದು ಸವಾಲು ಹಾಕಿದರು. ತನಿಖೆ ಮಾಡಲಿ, ಯಾವ ತನಿಖೆಯಲ್ಲಿ ಏನಾಗುತ್ತದೆ ನೋಡೋಣ. ವ್ಯಕ್ತಿಗತ ದ್ವೇಷಕ್ಕೆ ಅವಕಾಶ ಕೊಡಬಾರದು, ಆದರೂ ತನಿಖೆ ಮಾಡಲಿ. ಸಾಮಾನ್ಯವಾಗಿ ಹಿಂದುತ್ವದ ವಿಚಾರ ಅವರ ಗುರಿ ಇದೆ ಎಂಬುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದುಗಳಿಗೆ ಕಠಿಣ ದಿನವಾಗಲಿದೆ ಎಂದರು. ಓಲೈಕೆಗಾಗಿ ನೈತಿಕ ಪೊಲೀಸ್ ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ವಿರೋಧಿಸುವ ಕಾರ್ಯತಂತ್ರ ರೂಪುಗೊಂಡಿದೆ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣೆ ಕೊಡ್ತೇವೆ ಎಂದರು.

Sneha Gowda

Recent Posts

ಕಾಂಗ್ರೆಸ್‌ ಸಚಿವನ ಆಪ್ತನ ಮನೆಗೆ ಇಡಿ ದಾಳಿ : ಕಂತು ಕಂತು ಹಣದ ರಾಶಿ ಜಪ್ತಿ

ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಅಲಂ ಅವರ ಆಪ್ತ ಕಾರ್ಯದರ್ಶಿ ಮನೆಗೆ ಐಡಿ ರೈಡ್‌ ಮಾಡಿದ್ದು 30 ಕೋಟಿ ಅಧಿಕ ಹಣ…

15 mins ago

ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ನಿಧನ

ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ (79) ಇಂದು ಬೆಳಗಿನ…

23 mins ago

ಟಿ20 ವಿಶ್ವಕಪ್​ಗೆ ಭಯೋತ್ಪಾದಕರ ಬೆದರಿಕೆ !

ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್​ಗೆ ಭಯೋತ್ಪಾದಕರು…

30 mins ago

ಬೆಂಗಳೂರಿನಲ್ಲಿ ಬಿಯರ್ ಕೊರತೆ; ಆಫರ್​​ಗಳಿಗೆ ಬ್ರೇಕ್

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್​ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.

41 mins ago

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ : ಇಬ್ಬರನ್ನು ಹೊಡೆದು ಕೊಂದ ಜನ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ…

1 hour ago

ರೇವಣ್ಣ ವಿಡಿಯೋ: ಫೋಟೋ ಹರಿಯಬಿಡುವುದು ಶಿಕ್ಷಾರ್ಹ ಅಪರಾಧ : ಎಸ್ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್‌ಐಟಿ ಮುಖ್ಯಸ್ಥ…

2 hours ago