News Karnataka Kannada
Wednesday, April 24 2024
Cricket
ಮಂಗಳೂರು

ಅರುಣ್ ಪುತ್ತಿಲ ಬಂಡಾಯ ಸ್ಪರ್ಧೆ ವಿಚಾರ ಪ್ರಸನ್ನ ಮಾರ್ತ ಪ್ರತಿಕ್ರಿಯೆ

ಲೋಕಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧೆ ವಿಚಾರ ಕುರಿತಂತೆ ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ ಪ್ರತಿಕ್ರಿಯೆ ನೀಡಿದ್ದಾರೆ.
Photo Credit :

ಮಂಗಳೂರು:  ಲೋಕಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧೆ ವಿಚಾರ ಕುರಿತಂತೆ  ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ ಪ್ರತಿಕ್ರಿಯೆ ನೀಡಿದ್ದಾರೆ.

ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ, ವಿಜಯೇಂದ್ರ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಮಾತುಕತೆ ನಡೆದಿತ್ತು. ಎಲ್ಲರಿಂದಲೂ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ ಆದರೆ ಇಲ್ಲಿನ ತನಕ ಯಾವ ನಿರ್ಧಾರವನ್ನು ಅವರು ಕೈಗೊಂಡಿಲ್ಲ.ಹಾಗಾಗಿ ಪುತ್ತಿಲ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ, ಬಹಿರಂಗವಾಗಿ ಮಂಡಲ ಅಧ್ಯಕ್ಷ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು ಆದರೆ ಅದ್ಯಾವುದೂ ಈವರೆಗೆ ಸಫಲವಾಗಿಲ್ಲ. ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾ‌ರ್ ಪುತ್ತಿಲ ಸ್ಪರ್ದಿಸಲಿದ್ದಾರೆ. ಪುತ್ತೂರು ತಾಲೂಕಿನಲ್ಲಿ ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಸಂಘಟನೆ ಇದ್ರೆ ಅದು ಪುತ್ತಿಲ ಪರಿವಾರ ಮಾತ್ರ ಎಂದರು.

ಈಗಾಗಲೇ ನಾವು ಚಾಪು ಮೂಡಿಸಿದ್ದೇವೆ ಮುಂದೆ ಇನ್ನೂ ಹೆಚ್ಚು ಸೇವೆ ಸಲ್ಲಿಸುವ ಸಲುವಾಗಿ ನಮ್ಮ ಆರೋಗ್ಯ ಘಟಕದಿಂದ ಬೆಟ್ಟಂಪಾಡಿ ವಿಭಾಗದಲ್ಲಿ ಮಾ.3 ಕ್ಕೆ ಆ್ಯಂಬುಲೆನ್ಸ್‌ ಸೇವೆ ಆರಂಭಿಸಲಿದ್ದೇವೆ. ಮುಂದಿನ ದಿನ ಜಿಲ್ಲೆಯಾದ್ಯಂತ ಸಂಘಟನೆ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ ಸಂಘಟನೆಯನ್ನು ರಾಜ್ಯಕ್ಕೆ ವಿಸ್ತರಿಸಲಿದ್ದೇವೆ.

ಸಮಾಲೋಚನಾ ಸಭೆಯ ಬಳಿಕ ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಸ್ಪರ್ಧೆ ಇರಬೇಕೆಂದು ನಾವು ತೀರ್ಮಾನ ಕೈಗೊಂಡಿದ್ದೇವೆ, ಮುಂದೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ. ರಾಜ್ಯಕ್ಕೂ ಸೇವಾ ಸಂಘಟನೆ ವಿಸ್ತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.
ಹಾಗೂ ಈ ಪತ್ರಿಕಾಗೋಷ್ಠಿಯಲ್ಲಿ ಪರಿವಾರದ ವಕ್ತಾರ ಕೃಷ್ಣ ಉಪಾದ್ಯಾಯ, ಉಪಾದ್ಯಕ್ಷ ಮಹೇಂದ್ರ ವರ್ಮ, ನಗರ ಅಧ್ಯಕ್ಷ ಅನಿಲ್‌ ತೆಂಕಿಲ, ಕೋಡಿಬೈಲು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು