News Karnataka Kannada
Sunday, May 12 2024
ಮಂಗಳೂರು

ಮಂಗಳೂರು: 12ರಿಂದ 25 ರ ವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿ

ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಮಾರ್ಚ್ 1ರಂದು ಆರಂಭ ಆಗುವ ಈ ಪರೀಕ್ಷೆ ಮಾ.22 ರ ವರೆಗೆ ನಡೆಯಲಿದೆ. ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರ ವರೆಗೆ ಪರೀಕ್ಷೆಗಳು ನಡೆಯಲಿವೆ.
Photo Credit : Freepik

ಮಂಗಳೂರು,ಆ.11(ಕ.ವಾ): ಇದೇ ಆ.12ರಿಂದ 25ರ ವರೆಗೆ ನಗರದ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಕೊಡಿಯಾಲ ಬೈಲಿನ ಬೆಸೆಂಟ್ ಪದವಿ ಪೂರ್ವ ಕಾಲೇಜು, ಬೆಂದೂರುವೆಲ್ ನ ಸೈಂಟ್ ಆಗ್ನೇಸ್ ಪದವಿ ಪೂರ್ವ ಕಾಲೇಜು ಹಾಗೂ ಸುರತ್ಕಲ್ ನ ಗೋವಿಂದಾಸ್ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಯಲಿದೆ.

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಅನುಮಾಗಳಿಗೆ ಆಸ್ಪದವಿಲ್ಲದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಿಆರ್‍ಪಿ ಕಲಂ 144ರ ಪ್ರಕಾರ ಆ.12 ರಿಂದ 25 ರ ವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6.30ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಸಾರ್ವಜನಿಕರು 5ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೇಧಿಸಲಾಗಿದೆ, ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸುವುದು, ಚೀಟಿ ಅಥವಾ ಇನ್ನೀತರ ರೀತಿಯಲ್ಲಿ ಉತ್ತರ ಬರೆದು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ, ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದು ಅಥವಾ ಇನ್ನಿತರಮಾರಕ ಆಯುಧಗಳನ್ನು ಹೊಂದುವುದು ನಿಷೇಧಿಸಲಾಗಿದೆ, ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಅಥವಾ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ, ನಿಷೇಧಿತ ವಲಯದಲ್ಲಿ ಮೊಬೈಲ್ ದೂರವಾಣಿ ಹಾಗೂ ಬ್ಲೂಟೂತ್ ಇತ್ಯಾದಿ ಇಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ನಿಷೇಧಿಸಲಾಗಿದೆ, ಈ ನಿಷೇಧಾಜ್ಞೆಯು ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದ ಅಥವಾ ಸರ್ಕಾರದ ಆದೇಶದಂತೆ ನಡೆಸುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ, ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200ಮೀಟರ್ ವ್ಯಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸದಂತೆ ನಿಷೇಧಿಸಲಾಗಿದೆ ಎಂದು ಅವರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು