ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೋಟಾರು ವಾಹನ ನಿಯಮ ಉಲ್ಲಂಘಿಸಿದ 170 ಸವಾರರು ಮತ್ತು ಚಾಲಕರ ಚಾಲನಾ ಪರವಾನಗಿ ರದ್ದುಗೊಳಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿ 24 ಪ್ರಕರಣಗಳಲ್ಲಿ ಪರವಾನಗಿ ರದ್ದತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ನಿರ್ಲಕ್ಷ್ಯದ ಚಾಲನೆಗೆ 12, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ ಐದು, ರೆಡ್ ಸಿಗ್ನಲ್ ಜಂಪ್ ಮಾಡಿದಕ್ಕಾಗಿ 7 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೋಟಾರು ವಾಹನ ಕಾಯ್ದೆಯಡಿ ನಿಯಮಗಳನ್ನು ಉಲ್ಲಂಘಿಸಿದ 170 ಸವಾರರು ಮತ್ತು ಚಾಲಕರ ಚಾಲನಾ ಪರವಾನಗಿಯನ್ನು ರದ್ದುಗೊಳಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಪ್ರಸ್ತಾವನೆ ಸಲ್ಲಿಸಲಾಗಿದೆ.