Categories: ಮಂಗಳೂರು

ಬಂಟ್ವಾಳ: ನಕಲಿ ಜೇನು ಮಾರಾಟಗಾರರನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು

ಬಂಟ್ವಾಳ: ಬಿ.ಸಿ.ರೋಡ್‌ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ್ದಾರೆ.

ಕೈಕಂಬ ಜಂಕ್ಷನ್‌ನಲ್ಲಿರುವ ಕಟ್ಟಡದ ಮೇಲಂತಸ್ತಿನಲ್ಲಿ ಜೇನು ಗೂಡು ಕಟ್ಟಿತ್ತು. ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ. ಈ ನಡುವೆ ತಂಡ ಬೆಲ್ಲಪಾಕ ಹಾಗೂ ಜೇನು ಮೇಣವನ್ನು ಮೊದ ಸಿದ್ಧಪಡಿಸಿಟ್ಟುಕೊಂಡು ಈಗಷ್ಟೇ ತೆಗೆದ ಜೇನು ತುಪ್ಪ ಎಂದು ಜನರನ್ನು ನಂಬಿಸಿ ಮಾರಾಟ ಮಾಡಿ ಸಾವಿರ ರೂ. ಸಂಪಾದಿಸಿದ್ದರು. ಕೆಲಹೊತ್ತಿನಲ್ಲಿಯೇ ಇದು ಬೆಲ್ಲದ ಪಾಕ ಎಂದು ಅರಿವಾಗಿ ಆಕ್ರೋಶಿತ ಸಾರ್ವಜನಿಕರು ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಇನ್ನು ಎಲ್ಲೂ ನಕಲಿ ಜೇನುತುಪ್ಪ ಮಾರಾಟಮಾಡದಂತೆ ಎಚ್ಚರಿಕೆ ನೀಡಿ ಓಡಿಸಿದ್ದಾರೆಂದು ತಿಳಿದುಬಂದಿದೆ.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago