News Karnataka Kannada
Thursday, May 02 2024
ಮಂಗಳೂರು

ಪುತ್ತೂರು: ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕಿ 

Kerala: Schools, colleges to remain closed till September 24
Photo Credit : Pixabay

ಪುತ್ತೂರು:  ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸದೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಚಿಕ್ಕಮುಡ್ನೂರು ಬೀರ್ನಹಿತ್ಲು ಶಾಲೆಯ ಮೂರನೇ ಹಾಗೂ ಒಂದನೇ ತರಗತಿ ಮಕ್ಕಳನ್ನು ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸಿದೆ ಕರೆದುಕೊಂಡು ಹೋಗಿದ್ದು, ಈ ಕುರಿತು ಪೋಷಕರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಪತ್ರವೊಂದು ದೊರೆತಿದ್ದು, ಅದರಲ್ಲಿ ಪ್ರವಾಸಕ್ಕೆ ಹೋಗುವ ಸ್ಥಳಗಳನ್ನು ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಶಾಲೆಗೆ ಆಗಮಿಸಿದ ಪೋಷಕರು ಮತ್ತು ಸಾರ್ವಜನಿಕರು ಸಹಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಲ್ಲಿ ವಿಚಾರಿಸಿದಾಗ ಈ ಕುರಿತು ನಮಗೆ ತಿಳಿದಿಲ್ಲ, ಮುಖ್ಯ ಶಿಕ್ಷಕರ ಗಮನಕ್ಕೂ ತಿಳಿಸದೆ ಕರೆದುಕೊಂಡು ಹೋಗಿದ್ದಾರೆ. ಚಿಕ್ಕ ಮಕ್ಕಳಾದ ಕಾರಣ ಏನಾದರೂ ತೊಂದರೆ ಆದರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು