News Karnataka Kannada
Monday, April 29 2024
ಮಂಗಳೂರು

ಪುತ್ತೂರು: ಆಮ್ ಆದ್ಮಿ ಪುತ್ತೂರು ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್

Puttur: Aam Aadmi Party (AAP) candidate from Puttur B.K. Vishu Kumar
Photo Credit : News Kannada

ಪುತ್ತೂರು: ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ, ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್ ಅವರನ್ನು ಆಯ್ಕೆ ಮಾಡಿದೆ.

ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿತ್ತು. ಇದೀಗ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪುತ್ತೂರು ಬಿಟ್ಟರೆ ಜಿಲ್ಲೆಯ ಮಂಗಳೂರು ನಗರ ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಸಂದೀಪ್ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಕಳೆದೊಂದು ವರ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ತನ್ನ ಚಟುವಟಿಕೆಯನ್ನು ಚುರುಕುಗೊಳಿಸಿದ್ದು, ಜಿಲ್ಲಾ, ರಾಜ್ಯಮಟ್ಟದ ನಾಯಕರು ಪುತ್ತೂರಿಗೆ ಬಂದು ಠಿಕಾಣಿ ಹೂಡಲು ಶುರುವಿಟ್ಟುಕೊಂಡರು. ಈ ನಡುವೆ ನಗರದ ಎಪಿಎಂಸಿ ರಸ್ತೆಯ ಕಟ್ಟಡವೊಂದರಲ್ಲಿ ತನ್ನ ಕಚೇರಿಯನ್ನೂ ತೆರೆದರೂ. ಇತ್ತೀಚಿನ ದಿನಗಳಲ್ಲಿ ಕ್ಷೇತ್ರದಲ್ಲಿರುವ ಕೆಲವೊಂದು ಸಮಸ್ಯೆಗಳ ಕುರಿತು ಪ್ರತಿಭಟನೆ ಮೂಲಕ ನಗರಾಡಳಿತದ ಗಮನ ಸೆಳೆದಿತ್ತು. ಅಲ್ಲದೆ ಹಲವಾರು ಪತ್ರಿಕಾಗೋಷ್ಠಿಗಳನ್ನು ನಡೆಸಿ ಪಕ್ಷದ ಅಭ್ಯರ್ಥಿಯನ್ನು ಈ ಬಾರಿ ಪುತ್ತೂರಿನಲ್ಲಿ ಚುನಾವಣೆಗೆ ನಿಲ್ಲಿಸಲಾಗುವುದು ಎಂಬುದನ್ನು ತಿಳಿಸುತ್ತಾ ಬಂದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು