Categories: ಮಂಗಳೂರು

ಬಿಜೆಪಿ ಚಿಹ್ನೆ ಉಪಯೋಗ ದೂರು ಹಿನ್ನೆಲೆ: ಪುತ್ತಿಲರ ಚುನಾವಣಾ ಕಚೇರಿಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಜೆಪಿ ಪಕ್ಷದ ಚಿಹ್ನೆಯನ್ನು ಉಪಯೋಗಿಸಿ ಚುನಾವಣಾ ಪ್ರಚಾರ ಮಾಡುತ್ತಿರುವುದಾಗಿ ಚುನಾವಣಾಧಿಕಾರಿಗೆ ಬಂದಿರುವ ದೂರಿಗೆ ಸಂಬಂಧಿಸಿ ಚುನಾವಣಾ ಮಾದರಿ ನೀತಿ ಸಂಹಿತೆ ತಂಡ ಎ.30ರಂದು ಅರುಣ್ ಕುಮಾರ್ ಪುತ್ತಿಲ ಅವರ ಚುನಾವಣಾ ನಿರ್ವಹಣಾ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಅರುಣ್ ಕುಮಾರ್ ಪುತ್ತಿಲ ಅವರು ಚುನಾವಣಾಧಿಕಾರಿಯವರಿಗೆ ಯಾವುದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಲಿಖಿತ ರೂಪದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಅಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ರಾಜೇಶ್ ಬನ್ನೂರು ಅವರು ನೀಡಿದ ದೂರಿನಂತೆ ಪಕ್ಷೇತರ ಅಭ್ಯರ್ಥಿ ತನ್ನ ಪ್ರಚಾರ ಸಾಮಾಗ್ರಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ, ಪತ್ರಿಕಾ ಪ್ರಕಟಣೆಗಳಲ್ಲಿ ಈ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಮತ್ತು ಭಾವಚಿತ್ರವನ್ನು ಬಳಸುತ್ತಿದ್ದು, ತಾನು ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ.

ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿದ ಚಿಹ್ನೆಯನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಬೇಕೇ ವಿನಃ ರಾಷ್ಟ್ರೀಯ ನಾಯಕರ ಭಾವಚಿತ್ರಗಳನ್ನು ಪ್ರಚಾರ ಕಾರ್ಯದಲ್ಲಿ ಕಾನೂನು ರೀತ್ಯಾ ಉಪಯೋಗಿಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದ್ದು, ಇದನ್ನು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದರು. ಅದರಂತೆ ಚುನಾವಣಾಧಿಕಾರಿಯವರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ಕಚೇರಿಗೆ ತೆರಳಿ ಯಾವುದೇ ರೀತಿಯ ಅಕ್ರಮ ಕಂಡು ಬಂದಲ್ಲಿ ವರದಿ ಮಾಡುವಂತೆ ತಿಳಿಸಿದ್ದು, ಎ.30ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ನೋಡೆಲ್ ಅಧಿಕಾರಿ ಮಾದರಿನೀತಿ ಸಂಹಿತೆ ತಂಡ ನೋಡೆಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರ ನೇತೃತ್ವದ ತಂಡ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಅವರ ಚುನಾವಣಾ ನಿರ್ವಹಣಾ ಕಚೇರಿಗೆ ತೆರಳಿ ಚುನವಣಾ ಪ್ರಚಾರ ಮಾಡುವ ತಂಡ ಮತ್ತು ಕಚೇರಿಯಲ್ಲಿ ಪರಿಶೀಲನೆ ನಡೆಸಿ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ.

ಯಾವುದೇ ಅಕ್ರಮ ನಡೆಸಿಲ್ಲ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ:
ದೇಶದ ಪ್ರಧಾನಿ, ನಾಯಕರನ್ನು ನಾವು ಗೌರವದಿಂದ ಕಾಣುತ್ತೇವೆ ಹೊರತು ಅವರ ಹೆಸರನ್ನು ಬಳಸಿಕೊಂಡು ಯಾವುದೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿಲ್ಲ. ತಮ್ಮ ಮೇಲೆ ನೀಡಿರುವ ಆರೋಪ ಸುಳ್ಳು ಎಂದು ಅರುಣ್ ಕುಮಾರ್ ಪುತ್ತಿಲ ಅವರು ಚುನಾವಣಾಧಿಕಾರಿಗಳಿಗೆ ಲಿಖಿತ ಸ್ಪಷ್ಟನೆ ನೀಡಿದ್ದಾರೆ.

Sneha Gowda

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

1 hour ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

1 hour ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

2 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

2 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

2 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

2 hours ago